Breaking News

ರೇಣುಕಾಸ್ವಾಮಿ ಕೊಲೆ ಕೇಸ್‌ – ದರ್ಶನ್ ಅರೆಸ್ಟ್ ಆಗಿ 2 ವರ್ಷ

Spread the love

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್ ಅರೆಸ್ಟ್ ಆಗಿ (ಜೂ.11) 2 ವರ್ಷ ಪೂರೈಸಲಿದೆ.

ಕೊಲೆ ಕೇಸಲ್ಲಿ 2024 ಜೂನ್ 11ರಂದು ಮೈಸೂರಿನಲ್ಲಿ ಹೋಟೆಲ್‌ನಲ್ಲಿದ್ದಾಗಲೇ ಅರೆಸ್ಟ್ ಮಾಡಲಾಗಿತ್ತು. 1 ಬಾರಿ ಮಧ್ಯಂತರ ಜಾಮೀನು  ಪಡೆದು ಹೊರಬಂದಿದ್ದರು. ಅದಾದ ಬಳಿಕ ಸುಪ್ರೀಂನಲ್ಲಿ ಜಾಮೀನು ರದ್ದಾದ ಹಿನ್ನೆಲೆ ದರ್ಶನ್ ಸೇರಿ 7 ಆರೋಪಿಗಳು ಮತ್ತೆ ಜೈಲುಪಾಲಾಗಿದ್ದಾರೆ.

ಇನ್ನು, ದರ್ಶನ್ ಸಹಚರರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಐವರು ಆರೋಪಿಗಳ ಜಾಮೀನು ರದ್ದು ಕೋರಿ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ವಜಾ ಮಾಡಿದೆ.

ಪ್ರಕರಣದಲ್ಲಿ ಭಾಗಿಯಾಗಿದ್ದ ಎ-3 ಪವನ್, ಎ-4 ರಾಘವೇಂದ್ರ, ಎ-5-ನಂದೀಶ್, ಎ-9 ಧನರಾಜು ಹಾಗೂ ಎ-10 ವಿನಯ್ ಸೇರಿ ಜಾಮೀನಿಗಾಗಿ ಅರ್ಜಿ ಸಲ್ಲಿದ್ದರು. ಈ ಮಧ್ಯೆ, ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಮತ್ತೆ ಕಿಡಿಗೇಡಿಗಳ ಕಾಟ ಮುಂದುವರೆದಿದೆ. ಸೋಷಿಯಲ್‌ ಮೀಡಿಯಾದಲ್ಲಿ ವಿಜಯಲಕ್ಷ್ಮಿ ಮೂವಿಗೆ ಹೋದ ವಿಡಿಯೋ ಹಾಕಿ ಕೆಟ್ಟ ಕಾಮೆಂಟ್ ಮಾಡುವ ಮೂಲಕ ನಿಂದನೆ ಮಾಡಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ