Breaking News

ರೇಣುಕಾಸ್ವಾಮಿ ಕೊಲೆ ಕೇಸ್ – 2ನೇ ಬಾರಿ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಪವಿತ್ರಾಗೌಡ

Spread the love

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ  ಕೇಸ್‌ನಲ್ಲಿ ಜೈಲುಪಾಲಾಗಿರುವ ಆರೋಪಿ ಪವಿತ್ರಾ ಗೌಡ ಇದೀಗ ಎರಡನೇ ಬಾರಿಗೆ ಜಾಮೀನು ಕೋರಿ ಹೈಕೋರ್ಟ್  ಮೆಟ್ಟಿಲೇರಿದ್ದಾರೆ.

ಸುಪ್ರೀಂಕೋರ್ಟ್  ಜಾಮೀನು ರದ್ದು ಮಾಡಿದ ಬಳಿಕ CRPC 439 ಅಡಿಯಲ್ಲಿ ಪವಿತ್ರಗೌಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇಂದು (ನ.24) ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.

ಕಳೆದ ಒಂದು ವರ್ಷದಿಂದ ಪರಪ್ಪನ ಅಗ್ರಹಾರ ಜೈಲು ಸೇರಿದ್ದು, ಅಲ್ಲಿದ್ದುಕೊಂಡೇ ವಿಚಾರಣೆ ಎದುರಿಸುತ್ತಿದ್ದಾರೆ. ಈಗಾಗಲೇ ಕೇಸ್‌ನ ಐ-ವಿಟ್ನೇಸ್‌ಗಳು ಎಲ್ಲರೂ ಉಲ್ಟಾ ಸಾಕ್ಷ್ಯಗಳನ್ನು ನುಡಿಯುತ್ತಿದ್ದಾರೆ. ನಮ್ಮ ಕಕ್ಷಿದಾರರ ವಿರುದ್ಧ ಯಾವುದೇ ಆರೋಪ ವಿಚಾರಣೆಯಲ್ಲಿ ಬಂದಿಲ್ಲ. ಹೀಗಾಗಿ ಷರತ್ತುಗಳನ್ನು ವಿಧಿಸಿ ಜಾಮೀನು ನೀಡುವಂತೆ ಪವಿತ್ರಗೌಡ ಪರ ವಕೀಲರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಈ ಹಿಂದೆ ಸೆ.26ರಂದು 59ನೇ ಸೆಷನ್ಸ್ ಕೋರ್ಟ್ ಪವಿತ್ರಗೌಡ ಜಾಮೀನು ಅರ್ಜಿ ವಜಾ ಮಾಡಿತ್ತು. ಇದೀಗ ಹೈಕೋರ್ಟ್ಗೆ ವಕೀಲ ನಾರಾಯಣಸ್ವಾಮಿ ಮೂಲಕ ಅರ್ಜಿ ಸಲ್ಲಿಕೆ ಮಾಡಿದ್ದಾರೆ


Spread the love

About Laxminews 24x7

Check Also

ಜೈಲಿನಲ್ಲೂ ಕೆಪಿಎಸ್‌ಸಿ ಹಗರಣದ ಕಿಂಗ್‌ಪಿನ್ ಕನ್ನಾಳೆ ಕಳ್ಳಾಟ

Spread the loveಗಳೂರು: ಕೆಪಿಎಸ್‌ಸಿ  ನೇಮಕಾತಿ ಹಗರಣದ ಕಿಂಗ್‌ಪಿನ್ ಬಸವರಾಜ್ ಕನ್ನಾಳೆ  ತನ್ನ ಕಳ್ಳಾಟವನ್ನು ಜೈಲಿನಲ್ಲಿಯೂ ಮುಂದುವರಿಸಿದ್ದಾನೆ ಎನ್ನೋದು ಬಯಲಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ