Breaking News

ಗಣರಾಜ್ಯೋತ್ಸವ ಸಂಭ್ರಮ – ಪರೇಡ್‌ನಲ್ಲಿಂದು ಪಾಕ್‌ ಹುಟ್ಟಡಗಿಸಿದ S-400 ವಾಯು ರಕ್ಷಣಾ ವ್ಯವಸ್ಥೆ ಪ್ರದರ್ಶನ

Spread the love

ನವದೆಹಲಿ: ದೇಶಾದ್ಯಂತ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಆದರೆ ಇಡೀ ದೇಶದ ಜನರ ಚಿತ್ತ ಇಂದಿನ ದೆಹಲಿ ಕರ್ಥವ್ಯ ಪಥದ ಪರೇಡ್‌ನತ್ತ ನೆಟ್ಟಿದೆ. ಆಪರೇಷನ್‌ ಸಿಂಧೂರ ಸಮಯದಲ್ಲಿ ಪಾಕ್‌ ಕ್ಷಿಪಣಿಗಳನ್ನ ಧ್ವಂಸಗೊಳಿಸಲು ಭಾರತ ಬಳಸಿದ ಎಸ್‌-400 ವಾಯುರಕ್ಷಣಾ ವ್ಯವಸ್ಥೆಯನ್ನ ಇಂದು ದೆಹಲಿ ಪರೇಡ್‌ನಲ್ಲಿ ಪ್ರದರ್ಶಿಸಲಾಗುತ್ತಿದೆ.

77ನೇ ಗಣರಾಜ್ಯೋತ್ಸವ ಪರೇಡ್‌ನಲ್ಲಿ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಹತ್ತಾರು ಟ್ಯಾಬ್ಲೋಗಳನ್ನ ಪ್ರದರ್ಶಿಸಲಾಗುತ್ತಿದೆ. ಈ ಹಾದಿಯಾಗಿ‌ ರಕ್ಷಣಾ ಇಖೆಯ ಟ್ಯಾಬ್ಲೋ ವಿಭಾಗದಲ್ಲಿ S-400 (ಸುದರ್ಶನ ಚಕ್ರ) ವಾಯುರಕ್ಷಣಾ ವ್ಯವಸ್ಥೆಯನ್ನ ಪ್ರದರ್ಶಿಸಲಾಗುತ್ತಿದೆ.

ವಾಯುಪಡೆಯ ಗೇಮ್‌ ಚೇಂಜರ್‌ ಎಂದೇ ಗುರುತಿಸಿಕೊಂಡಿರುವ ಎಸ್-400 ವಾಯು ರಕ್ಷಣಾ ವ್ಯವಸ್ಥೆಗಳು ಆಪರೇಷನ್ ಸಿಂಧೂರ ಸಮಯದಲ್ಲಿ ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿದ್ದವು. ದೀರ್ಘ-ಶ್ರೇಣಿಯ ಮೇಲ್ಮೈಯಿಂದ ಆಕಾಶಕ್ಕೆ ಚಿಮ್ಮುವ ಕ್ಷಿಪಣಿ ವ್ಯವಸ್ಥೆಯು ಪಾಕ್‌ನ ಮಿಸೈಲ್‌, ಡ್ರೋನ್‌ಗಳನ್ನ ಹೊಡೆದುರುಳಿಸಿದ್ದವು. ಇದಾದ ಬಳಿಕ ವಿಶ್ವದ ಬೇರೆ ಬೇರೆ ರಾಷ್ಟ್ರಗಳಿಂದಲೂ ಎಸ್‌-400 ಗೆ ಬೇಡಿಕೆ ಹೆಚ್ಚಾಗಿದೆ.

2018ರಲ್ಲಿ ಭಾರತ ಎಸ್‌-400 ವಾಯು ರಕ್ಷಣಾ ವ್ಯವಸ್ಥೆಗಳಿಗಾಗಿ ರಷ್ಯಾದೊಂದಿಗೆ 5.5 ಶತಕೋಟಿ ಡಾಲರ್‌ ಒಪ್ಪಂದಕ್ಕೆ ಸಹಿ ಹಾಕಿತ್ತು. ಚೀನಾದ ಮಿಲಿಟರಿ ಶಕ್ತಿಯನ್ನು ಎದುರಿಸುವ ಉದ್ದೇಶದಿಂದ ಅಂದು ಭಾರತ, ರಷ್ಯಾ ಜೊತೆ ಈ ಒಪ್ಪಂದಕ್ಕೆ ಸಹಿ ಹಾಕಿತ್ತು. ಆದ್ರೆ ಈವರೆಗಿನ ಪೂರೈಕೆಯಲ್ಲಿ ವಿಳಂಬವಾಗಿತ್ತು. ಇದೀಗ ಈ ಒಪ್ಪಂದದ ಅಡಿಯಲ್ಲಿ ಕೊನೆಯ 2 ಘಟಕಗಳು 2026 ಮತ್ತು 2027ರ ವೇಳೆ ಭಾರತಕ್ಕೆ ಲಭ್ಯವಾಗಲಿದೆ.


Spread the love

About Laxminews 24x7

Check Also

ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

Spread the loveಮೈಸೂರು: ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯ. ದೇವರಾಜ ಅರಸು ಅವರು ಎಷ್ಟು ವರ್ಷ ಆಡಳಿತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ