Breaking News

ಗೋಕಾಕ-ಧಾರವಾಡ ಹೆದ್ದಾರಿ ಮೇಲ್ದರ್ಜೆಗೆ 86.40 ಕೋಟಿ ರೂ. ಅನುದಾನ ಬಿಡುಗಡೆ ಮನವಿ

Spread the love

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 80.33 ಕಿಮೀ ಉದ್ದದ ರಸ್ತೆ ಸುಧಾರಣೆಗೆ  ಕೇಂದ್ರ ಮೂಲಸೌಕರ್ಯ ರಸ್ತೆ ನಿಧಿ ಯೋಜನೆ ಅಡಿಯಲ್ಲಿ  86.40 ಕೋಟಿ ರೂ. ಅನುದಾನ ಬಿಡುಗಡೆ ಕೇಂದ್ರ ಹೆದ್ದಾರಿ ಸಚಿವ ನಿತಿನ ಗಡ್ಕರಿ ಅವರಿಗೆ  ಸಂಸದ ಜಗದೀಶ  ಶೆಟ್ಟರ ಮನವಿ ಸಲ್ಲಿಸಿದರು.
ದೆಹಲಿಯ ಹೊಸ ಸಂಸದ ಭವನದಲ್ಲಿ ಗುರುವಾರ ಕೇಂದ್ರ ಸಚಿವರನ್ನು ಭೇಟಿ ಮಾಡಿ, ಬೆಳಗಾವಿ ಲೋಕಸಭಾ ವ್ಯಾಪ್ತಿಯಡಿ ಕೈಗೊಳ್ಳಬೇಕಾದ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚಿಸಿದರು.
 ಗೋಕಾಕದಿಂದ ಯರಗಟ್ಟಿ ಹಾಗೂ ಸವದತ್ತಿ ಮಾರ್ಗವಾಗಿ ಧಾರವಾಡದ ವರೆಗೆ ಈಗಿರುವ ದ್ವಿಪಥ ರಸ್ತೆಯನ್ನು ಚರ್ತುಪಥ ರಸ್ತೆಯನ್ನಾಗಿ ಪರಿವರ್ತಿಸುವುದು ಅವಶ್ಯಕತೆಯಿದೆ.   ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯು ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದ ವಾಹನ ಟ್ರ್ಯಾಕಿಂಗ್ ವ್ಯವಸ್ಥೆ  ಬಲಪಡಿಸುವ ಯೋಜನೆಯಡಿ 25.39 ಕೋಟಿ ರೂ. ಅನುದಾನ ಬಿಡುಗಡೆ ಕ್ರಮ ವಹಿಸಬೇಕು. ನಿರ್ಭಯ ನಿಧಿ ಯೋಜನೆಯಡಿ 1 ಸಾವಿರ ಬಸ್‌ಗಳಿಗೆ ಕ್ಯಾಮರಾ ಅಳವಡಿಸಲು 59.13 ಕೋಟಿ ರೂ. ಪ್ರಸ್ತಾವನೆಗೆ ಒಪ್ಪಿಗೆ ನೀಡಬೇಕು ಎಂದು ವಿನಂತಿಸಿದರು.
ಇದಕ್ಕೆ ಸ್ಪಂದಿಸಿದ ಸಚಿವ ನಿತಿನ್ ಗಡ್ಕರಿ ಅವರು, ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ರಸ್ತೆ ಅಭಿವೃದ್ಧಿ ಸೇರಿ ವಿವಿಧ ಕಾಮಗಾರಿಗಳಿಗೆ  ಅನುದಾನ ಬಿಡಗಡೆಗೆ ಸಚಿವರು ಭರವಸೆ ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ