Breaking News

ಬೆಳಗಾವಿಯ ನಾಯಕರಿಗೆ ಉಪಕದನ ಗೆಲ್ಲಿಸುವ ಜವಾಬ್ದಾರಿ – ಕಾಂಗ್ರೆಸ್ ಹೈಕಮಾಂಡ್ ಆದೇಶ

Spread the love

ಬೆಳಗಾವಿ: ಗಡಿಜಿಲ್ಲೆಯ ಮೂವರು ಘಟಾನುಘಟಿ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್  ಉಪಚುನಾವಣೆಯಲ್ಲಿ ಗೆಲ್ಲಿಸುವ ಟಾಸ್ಕ್ ನೀಡಿದೆ. ಸೂಚನೆ ಬೆನ್ನಲ್ಲೇ ಬೆಳಗಾವಿ ನಾಯಕರು ಅಖಾಡಕ್ಕಿಳಿದಿದ್ದಾರೆ.

ಬಾಗಲಕೋಟೆ  ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಹೊಣೆಗಾರಿಕೆ ಸಚಿವ ಸತೀಶ್ ಜಾರಕಿಹೊಳಿ ಹೆಗಲಿಗೆ ಹಾಕಿದ್ದಾರೆ. ದಾವಣಗೆರೆಯಲ್ಲಿ  ಗೆಲ್ಲಿಸುವ ಜವಾಬ್ದಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆನೀಡಲಾಗಿದೆ. ಈ ಎರಡೂ ಕ್ಷೇತ್ರದಲ್ಲಿ ಸ್ಟಾರ್ ಪ್ರಚಾರಕರಾಗಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿಯವರನ್ನು  ಹೈಕಮಾಂಡ್ ನೇಮಕ ಮಾಡಿದೆ.

ಸಂಘಟನಾ ಚತುರತೆ ಹಿನ್ನೆಲೆ ಮೂವರು ನಾಯಕರಿಗೆ ಟಾಸ್ಕ್ ನೀಡಲಾಗಿದ್ದು, ಸವದಿ, ಜಾರಕಿಹೊಳಿ, ಹೆಬ್ಬಾಳ್ಕರ್‌ಗೆ ಜಿದ್ದಾಜಿದ್ದಿನ ಚುನಾವಣೆ ಎದುರಿಸಿದ ಅನುಭವ ಇದೆ. ಹೀಗಾಗಿ ಲಿಂಗಾಯತ ಹಾಗೂ ಅಹಿಂದ ಕಾರ್ಡ್ ಬಳಸಿ, ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಮೂವರು ನಾಯಕರು ತಂತ್ರ ರೂಪಿಸುತ್ತಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ