Breaking News

50,000 ಲಂಚ ಸ್ವೀಕರಿಸುವಾಗ ʻಲೋಕಾʼ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

Spread the love

 

ದಾವಣಗೆರೆ: ನಗರದಲ್ಲಿ ವೈದ್ಯರೊಬ್ಬರಿಂದ 50,000 ರೂ. ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷನೊಬ್ಬ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.

ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕನನ್ನು ಚಂದ್ರಪ್ಪ ಎಂದು ಗುರುತಿಸಲಾಗಿದೆ. ಈತ ಭೂಮಿ ಸರ್ವೇ ಮಾಡಲು ವೈದ್ಯರ ಬಳಿ 50,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ಈತ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.

ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್ ಕೌಲಾಪುರೆ, ಡಿವೈಎಸ್‌ಪಿ ಕಲಾವತಿ ನೇತ್ರತ್ವದಲ್ಲಿ ಇನ್ಸ್‌ಪೆಕ್ಟರ್ ಗುರುಬಸವರಾಜ್ ಪ್ರಭು ಸೂರಿನ್ ಹಾಗೂ ಸರಳಾ ಅವರು ದಾಳಿ ನಡೆಸಿದ್ದರು.


Spread the love

About Laxminews 24x7

Check Also

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Spread the love ಬೆಂಗಳೂರು: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವರಾದ ಅಮಿತ್‌ ಶಾ ಬೆಂಗಳೂರಿಗೆ ಆಗಮಿಸಿದರು. ಅವರನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ