ಮುಂಬೈ: ಬಾಲಿವುಡ್ ಹಿರಿಯ ನಟ ರಿಷಿ ಕಪೂರ್, ಲೈಸನ್ಸ್ ಹೊಂದಿರುವ ಮದ್ಯದಂಗಡಿಗಳನ್ನು ತೆಗೆಯಬೇಕೆಂದು ಆಗ್ರಹಿಸಿ ಟ್ವೀಟ್ ಮಾಡಿದ್ದಾರೆ.
ಕೊರೊನಾ ತಡೆಗೆ ಪ್ರಧಾನಿಗಳು ದೇಶವನ್ನು ಲಾಕ್‍ಡೌನ್ ಮಾಡಿದಾಗಿನಿಂದಲೂ ರಿಷಿ ಕಪೂರ್ ಈ ವಿಷಯವಾಗಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇಂದು ಟ್ವೀಟ್ ಮಾಡಿರುವ ರಿಷಿ ಕಪೂರ್, ಒಂದು ಕಾರಣಕ್ಕಾಗಿ ಪರವಾನಿಗೆ ಪಡೆದ ಮದ್ಯದಂಗಡಿಗಳನ್ನು ತೆರೆದರೆ ಸೂಕ್ತ ಎಂದಿದ್ದಾರೆ.
ರಿಷಿ ಕಪೂರ್ ಟ್ವೀಟ್: ಸರ್ಕಾರ ಪ್ರತಿಸಂಜೆ ಲೈಸನ್ಸ್ ಹೊಂದಿರುವ ಮದ್ಯದ ಮಳಿಗೆಗಳನ್ನು ತೆರೆಯಲು ಅನುಮತಿ ನೀಡಬೇಕು. ನೀವು ನನ್ನನ್ನು ತಪ್ಪು ತಿಳಿದುಕೊಳ್ಳಬೇಡಿ. ಜನರು ಮನೆಯಲ್ಲಿ ಡಿಪ್ರೆಶನ್ ಮತ್ತು ಗೊಂದಲಗಳ ನಡುವೆ ಬಂಧಿಯಾಗಿದ್ದಾರೆ. ಪೊಲೀಸ್, ವೈದ್ಯರು ಮತ್ತು ಜನರನ್ನು ಡಿಪ್ರೆಶನ್ ನಿಂದ ಮುಕ್ತಿಗೊಳಿಸಲು ಮದ್ಯದ ಅವಶ್ಯಕತೆ ಇದೆ. ನೀವು ಎಷ್ಟೇ ಬಂದ್ ಮಾಡಿದ್ರೂ ಬ್ಲಾಕ್ ನಲ್ಲಿ ಮದ್ಯ ಮಾರಾಟವಾಗುತ್ತಿದೆ. ಹಾಗಾಗಿ ಸರ್ಕಾರವೇ ಪ್ರತಿದಿನ ಸಂಜೆ ಮದ್ಯದಂಗಗಡಿಗಳಿಗೆ ವ್ಯಾಪಾರ ನಡೆಸಲು ಅನುಮತಿ ನೀಡಬೇಕು.
ಮದ್ಯದಂಗಡಿಗಳ ತೆರೆಯುವದಿಂದ ರಾಜ್ಯ ಸರ್ಕಾರದ ಬೊಕ್ಕಸದಲ್ಲಿ ಚೇತರಿಕೆ ಕಾಣುವ ಸಾಧ್ಯತೆಗಳು ಹೆಚ್ಚಿವೆ. ಜನರು ಫ್ರೆಸ್ಟ್ರೆಶನ್ ನಿಂದ ಡಿಪ್ರೆಶನ್ ಗೆ ಒಳಗಾಗುವುದನ್ನು ತಡೆಯಬೇಕಿದೆ. ಬಂದ್ ನಡುವೆ ಜನ ಕಷ್ಟಪಟ್ಟು ಮದ್ಯ ಖರೀದಿಸುತ್ತಿದ್ದಾರೆ. ಹಾಗಾಗಿ ಸರ್ಕಾರ ತನ್ನ ಮಳಿಗೆಗಳಲ್ಲಿ ಮದ್ಯದ ಮಾರಾಟಕ್ಕೆ ಅವಕಾಶ ಕಲ್ಪಿಸಬೇಕೆಂದು ಹೇಳಿದ್ದಾರೆ.