ಬೆಳಗಾವಿ: ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ತನ್ನ ಮನೆ ಮುಂದೆ ವಾಹನ ತೊಳೆಯುತ್ತಿದ್ದ ಯೋಧನನ್ನು ಮಾಸ್ಕ್ ಧರಿಸಿಲ್ಲ ಎಂಬ ಕಾರಣಕ್ಕೆ ಬಂಧಿಸಿರುವುದು ಖಂಡನೀಯ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಯೋಧನೊಂದಿಗೆ ಪೊಲೀಸರು ಅನುಚಿತವಾಗಿ ವರ್ತಿಸಿದ್ದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಒಬ್ಬ ಯೋಧ ಎನ್ನುವುದನ್ನೂ ಗಮನಿಸದೇ ಸಾರ್ವಜನಿಕವಾಗಿ ಹಿಂಸಿಸಿ, ಒಬ್ಬ ಕೈದಿಯಂತೆ ಕೈಗೆ ಕೋಳ ತೊಡಿಸಿ ಬಂಧಿಸಿರುವುದನ್ನು ಯಾವುದೇ ಕಾರಣಕ್ಕೂ ಸಮರ್ಥನೆ ಮಾಡಲು ಸಾಧ್ಯವಿಲ್ಲ ಎಂದು ಸಚಿವರು ಕಿಡಿ ಕಾರಿದ್ರು.
ಒಬ್ಬ ನಿರಪರಾಧಿ ಯೋಧನನ್ನು ಅತ್ಯಂತ ಅಮಾನುಷವಾಗಿ ಹಿಂಸಿಸಿ, ಬಂಧಿಸಿರುವುದು ಸಮವಸ್ತ್ರ ಧರಿಸಿದ ಸೈನಿಕರಿಗೆ ಮಾಡಿದ ಅವಮಾನ. ಕೂಡಲೇ ಬಂಧಿತ ಅರೆ ಸೈನಿಕ ಪಡೆಯ ಯೋಧನನ್ನು ಗೌರವದಿಂದ ಬಿಡುಗಡೆ ಮಾಡಬೇಕು ಮತ್ತು ತಪ್ಪಿತಸ್ಥ ಪೊಲೀಸ್ ಸಿಬ್ಬಂದಿಯ ಮೇಲೆ ತನಿಖೆ ನಡೆಸಿ ಶಿಸ್ತಿನ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಗೃಹ ಸಚಿವರನ್ನು ಒತ್ತಾಯಿಸಿದ್ದಾರೆ.
Laxmi News 24×7