ಬೆಳಗಾವಿ: ಬೆಳಗಾವಿ ಜಿಲ್ಲೆಗೆ ಹೊಸದಾಗಿ ಕೋವಿಡ್ – 19 ಲ್ಯಾಬ್ ಮಂಜೂರುಯಾಗಿದ್ದು, ಗಂಟಲು ದ್ರವ ಮಾದರಿಯನ್ನು ಪರೀಕ್ಷಿಸುವ ಪ್ರಯೋಗಾಲಯ ಆವರಣಕ್ಕೆ ಜಲಸಂಪನ್ಮೂಲ ಸಚಿವ ರ ಭೇಟಿ, ಪರಿಶೀಲನೆ ನಡೆಸಿದರು.
ಬೆಳಗಾವಿಯ ನೆಹರೂ ನಗರದ ಕೆ.ಎಲ್.ಇ. ಆಸ್ಪತ್ರೆ ಎದುರಿಗೆ ಇರುವ ಭಾರತ ಸರ್ಕಾರದ ಆರೋಗ್ಯ ಸಂಶೋಧನಾ & ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ “ಐಸಿಎಂಆರ್-ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆ”ಯ ಆವರಣದಲ್ಲಿ ಕೋವಿಡ್ – 19 ಪರೀಕ್ಷಾ ಪ್ರಯೋಗಾಲಯ ಆರಂಭಕ್ಕೆ ಈಗಾಗಲೇ ಅನುಮತಿ ದೊರೆತಿರುವ ಹಿನ್ನೆಲೆಯಲ್ಲಿ ಪ್ರಯೋಗಾಲಯ ಆವರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಮತ್ತು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಯವರು ಭೇಟಿ ನೀಡಿದರು.
ಪ್ರಯೋಗಾಲಯ ಸ್ಥಾಪನೆ ಕುರಿತು ಮುಂದಿನ ಪ್ರಕ್ರಿಯೆ ಆರಂಭಿಸುವ ಬಗ್ಗೆ ಸಂಸ್ಥೆಯ ನಿರ್ದೇಶಕರ ಜತೆ ಸಚಿವರು ಚರ್ಚೆ ನಡೆಸಿದರು. ಪ್ರಯೋಗಾಲಯ ಮಂಜೂರಾಗಿರುವುದರಿಂದ ಅಗತ್ಯ ಸಾಮಗ್ರಿ ಮತ್ತು ಕಿಟ್ ತರಿಸಿಕೊಂಡು ತಕ್ಷಣವೇ ಪ್ರಯೋಗಾಲಯ ಆರಂಭಿಸುವಂತೆ ಸಚಿವರು, ಸಂಸ್ಥೆಯ ನಿರ್ದೇಶಕರಿಗೆ ಸೂಚನೆ ನೀಡಿದರು.