Breaking News
Home / ಜಿಲ್ಲೆ / ಮುಂದಿನ 30 ವರ್ಷಗಳ ನೀರಾವರಿ ‌ಯೋಜನೆಗಳ ಅನುಷ್ಠಾನಕ್ಕಾಗಿ ನೀರಾವರಿ ಆಯೋಗ ಸ್ಥಾಪನೆ

ಮುಂದಿನ 30 ವರ್ಷಗಳ ನೀರಾವರಿ ‌ಯೋಜನೆಗಳ ಅನುಷ್ಠಾನಕ್ಕಾಗಿ ನೀರಾವರಿ ಆಯೋಗ ಸ್ಥಾಪನೆ

Spread the love

ಬೆಂಗಳೂರು : ಮುಂದಿನ 30 ವರ್ಷಗಳ ನೀರಾವರಿ ‌ಯೋಜನೆಗಳ ಅನುಷ್ಠಾನದ ಉದ್ದೇಶದಿಂದ ಕರ್ನಾಟಕ ರಾಜ್ಯ ನೀರಾವರಿ ಆಯೋಗ ಸ್ಥಾಪನೆ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡುವುದಾಗಿ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ‌ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ನಿವೃತ್ತ ಕಾರ್ಯದರ್ಶಿ ಕ್ಯಾ ರಾಜಾರಾವ್ ಅವರೊಂದಿಗೆ ಕರ್ನಾಟಕ ರಾಜ್ಯದ ನೀರಾವರಿ ಯೋಜನೆಗಳ ಕುರಿತು ಚರ್ಚಿಸಿದ ನಂತರ‌ ಮಾತನಾಡಿದ ಸಚಿವರು, ಕುಡಿಯುವ ನೀರು, ಅಂತರ್ಜಲ ಮತ್ತು ಔದ್ಯೋಗಿಕ ಕ್ಷೇತ್ರದಲ್ಲಿ ನೀರಿನ ಬಳಕೆ ಕುರಿತಂತೆ ದೂರದೃಷ್ಟಿಯ ನೀಲನಕ್ಷೆ ಸಿದ್ದಪಡಿಸಲಾಗುವುದು ಎಂದರು.

ಮುಂದಿನ‌ ಮಳೆಗಾಲದಲ್ಲಿ ಅತಿವೃಷ್ಠಿ ತಡೆಗೆ ವ್ಯಾಪಕ‌ ಕ್ರಮ ಕೈಗೊಳ್ಳಲಾಗಿದೆ. ನಮ್ಮ ನೀರನ್ನು‌ ಉಳಿಸಿಕೊಂಡು ಯೋಜನೆಗಳನ್ನು‌ ಪ್ರಾರಂಭಿಸುತ್ತೇವೆ ಎಂದರು.

ನೀರಿನ‌ ಸದ್ಬಳಕೆಗೆ ಅಂತರ ರಾಜ್ಯ ನದಿ ಜೋಡಣೆ ಮಾಡಬೇಕಾದ ಅಗತ್ಯವಿದೆ. ಇದರಿಂದ ರಾಜ್ಯದ ನೀರಿನ‌ ಪಾಲು ಕೂಡಾ ಹೆಚ್ಚಾಗಲಿದೆ. ಹಾಗಾಗಿ ಕೇಂದ್ರ ಸರ್ಕಾರದ ಜಲಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ಚರ್ಚಿಸಲಾಗುವುದು ಎಂದರು.

ಹನಿ ನೀರಾವರಿ ಯೋಜನೆಗಳ ಅನುಷ್ಠಾನ ಕುರಿತು ವಿಸ್ತೃತ ನೀತಿ ರೂಪಿಸುತ್ತೇವೆ. ದೊಡ್ಡ ಮಟ್ಟದ ಏತ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಸರ್ಕಾರ, ನೀತಿಯನ್ನು ರೂಪಿಸಬೇಕಾಗಿದ್ದು ಈ ಕುರಿತಂತೆ ಇಲಾಖೆಯ ಮಟ್ಟದಲ್ಲಿ ಚರ್ಚೆ ಮಾಡಿ ಶೀಘ್ರವಾಗಿ ತೀರ್ಮಾನವನ್ನು ಕೈಗೊಳ್ಳಲಾಗುವುದೆಂದರು.

ಕೃಷ್ಣ ನದಿ ನೀರಿನ ಸದ್ಬಳಕೆಗಾಗಿ ಕೃಷ್ಣ ನದಿ ನೀರು ಬಳಕೆ ಕೂಡಲೇ ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರಕ್ಕೆ ಮನವಿ‌ ಮಾಡಲಾಗುವುದು. ಈ‌ ಕುರಿತು ಮುಖ್ಯಮಂತ್ರಿಗಳು ಮತ್ತು ಕೇಂದ್ರದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ‌ಸಚಿವರೊಂದಿಗೆ ಚರ್ಚಿಸಿ, ನವದೆಹಲಿಗೆ ತೆರಳಿ ಕೇಂದ್ರದ ಜಲಶಕ್ತಿ ಸಚಿವರೊಂದಿಗೆ ಈ‌ ಕುರಿತು ಮಾತನಾಡಿ ಕೂಡಲೇ ಅಧಿಸೂಚನೆ ಹೊರಡಿಸಲು‌ ಮನವಿ‌ ಮಾಡುತ್ತೇವೆ ಎಂದು ಭರವಸೆ ನೀಡಿದರು.


Spread the love

About Laxminews 24x7

Check Also

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ಬೆಂಗಳೂರಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ

Spread the loveಬೆಂಗಳೂರು: ಕರ್ನಾಟಕ ಪೊಲೀಸ್ ಇತಿಹಾಸದಲ್ಲಿ ಸಿಸಿಬಿ ಅಧಿಕಾರಿಗಳು ಡ್ರಗ್ಸ್​​ ಕೇಸ್​ನಲ್ಲಿ ಅತೀದೊಡ್ಡ ಕಾರ್ಯಾಚರಣೆ ನಡೆಸಿದ್ದಾರೆ. ಇದುವರೆಗೆ ಡ್ರಗ್ಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ