Breaking News

ದೆಹಲಿಯಲ್ಲಿ ರಸ್ತೆ ಅಪಘಾತ – ಬೆಳಗಾವಿ ಶಾಸಕ ಅಭಯ್‌ ಪಾಟೀಲ್‌ ಪ್ರಾಣಾಪಾಯದಿಂದ ಪಾರು

Spread the love

ನವದೆಹಲಿ: ಭಾನುವಾರ ರಾತ್ರಿ ದೆಹಲಿಯ  ಐಟಿಒ  ಜಂಕ್ಷನ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಹಾಗೂ ದೆಹಲಿಯ ಕಿರಾರಿ ಕ್ಷೇತ್ರದ ಶಾಸಕ ಅನಿಲ್ ಝಾ ಸೇರಿ ಒಟ್ಟು 6 ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಾತ್ರಿ ಸುಮಾರು 9:30 ರ ಸುಮಾರಿಗೆ ಲಕ್ಷ್ಮೀ ನಗರದಿಂದ ಐಟಿಒ ಕಡೆಗೆ ಬರುತ್ತಿದ್ದ ಸ್ವಿಫ್ಟ್ ಕಾರಿನ ಸಿಲಿಂಡರ್ ಪಿಡಬ್ಲ್ಯೂಡಿ ಕಚೇರಿ ಬಳಿ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಇದರ ಪರಿಣಾಮವಾಗಿ ಚಾಲಕನ ನಿಯಂತ್ರಣ ತಪ್ಪಿದ ಕಾರು, ರಸ್ತೆ ವಿಭಜಕ (ಡಿವೈಡರ್) ಹಾಗೂ ರೇಲಿಂಗ್‌ಗೆ ಡಿಕ್ಕಿ ಹೊಡೆದು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ‘ಕರ್ನಾಟಕ ಸರ್ಕಾರ’ದ ಬೋರ್ಡ್ ಹೊಂದಿದ್ದ ಇನ್ನೋವಾ ಎಸ್‌ಯುವಿ ಕಾರಿಗೆ ರಭಸವಾಗಿ ಅಪ್ಪಳಿಸಿದೆ.

ಸ್ವಿಫ್ಟ್ ಕಾರನ್ನು ಅಶುತೋಷ್ ಪಾಂಡೆ (32) ಎಂಬುವವರು ಚಲಾಯಿಸುತ್ತಿದ್ದು, ಕಾರಿನಲ್ಲಿ ಅವರ ಪತ್ನಿ ಹಾಗೂ ಇಬ್ಬರು ಅಪ್ರಾಪ್ತ ಮಕ್ಕಳಿದ್ದರು. ಇನ್ನೋವಾ ಕಾರಿನಲ್ಲಿ ಶಾಸಕರಾದ ಅನಿಲ್ ಝಾ ಹಾಗೂ ಅಭಯ್ ಪಾಟೀಲ್ ಪ್ರಯಾಣಿಸುತ್ತಿದ್ದರು.

ಅಪಘಾತದ ತೀವ್ರತೆಗೆ ಸ್ವಿಫ್ಟ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಇನ್ನೋವಾ ಕಾರಿನ ಮುಂಭಾಗವೂ ಜಖಂಗೊಂಡಿದೆ. ಎರಡೂ ಕಾರುಗಳ ಏರ್‌ಬ್ಯಾಗ್‌ಗಳು ತೆರೆದುಕೊಂಡಿದ್ದರಿಂದ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ. ಸ್ಥಳೀಯರು ಹಾಗೂ ಪೊಲೀಸರು ಗಾಯಾಳುಗಳನ್ನು ತಕ್ಷಣವೇ ಎಲ್‌ಎನ್‌ಜೆಪಿ  ಆಸ್ಪತ್ರೆಗೆ ದಾಖಲಿಸಿದ್ದು, ಎಲ್ಲರ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಐಪಿ ಎಸ್ಟೇಟ್ ಠಾಣಾ ಪೊಲೀಸರು ಧಾವಿಸಿ ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಸಿಲಿಂಡರ್ ಸ್ಫೋಟಕ್ಕೆ ನಿಖರ ಕಾರಣ ಮತ್ತು ಕಾರಿನ ವೇಗದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

ಟಿಬಿ ಮುಕ್ತ ಭಾರತ ಅಭಿಯಾನ ಅತ್ಯಂತ ಶ್ಲಾಘನೀಯ

Spread the loveಬೆಳಗಾವಿ : ಭಾರತವನ್ನು ಕ್ಷಯರೋಗ (ಟಿಬಿ) ಮುಕ್ತ ರಾಷ್ಟ್ರವನ್ನಾಗಿ ರೂಪಿಸುವ ಸಂಕಲ್ಪದೊಂದಿಗೆ ಕೇಂದ್ರ ಸರ್ಕಾರ ಕೈಗೊಂಡಿರುವ ಅಭಿಯಾನ ಅತ್ಯಂತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ