Breaking News

2.50 ಕೋಟಿ ರೂ.ವೆಚ್ಚದಲ್ಲಿ ರಸ್ತೆ ನಿರ್ಮಾಣ: ಕಾಮಗಾರಿಗೆ ಚಾಲನೆ

Spread the love

 ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ತುರಮುರಿ ಹಾಗೂ ಕೋನೆವಾಡಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣದ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಸೇರಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು‌.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಅನುದಾನ ಮಂಜೂರಾಗಿದ್ದು, ಸುಮಾರು 2.50 ಕೋಟಿ ರೂ.ಗಳ ವೆಚ್ಚದಲ್ಲಿ 2.7 ಕಿ.ಮೀ ರಸ್ತೆ ನಿರ್ಮಾಣವಾಗಲಿದೆ. ರಸ್ತೆಯ ಗುಣಮಟ್ಟ ಕಾಯ್ದುಕೊಳ್ಳುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಈ ವೇಳೆ ಆಯಾ ಗ್ರಾಮಗಳ ಹಿರಿಯರು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ನರ್ಸಿಂಗ್ ಎಂದರೆ ಉದ್ಯೋಗವಲ್ಲ ಅದು ಸೇವಾ ಧರ್ಮ

Spread the loveಬೆಳಗಾವಿ :  ನರ್ಸಿಂಗ್ ಎಂದರೆ ಕೇವಲ ಒಂದು ಉದ್ಯೋಗವಲ್ಲ, ಅದು ಒಂದು ಸೇವಾ ಧರ್ಮ.  ನರ್ಸ್ ಗಳು ಹೃದಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ