Breaking News

ಬೆಳಗಾವಿಯ ಹೈವೇ ಮೇಲೆ ವಾಹನ ಅಡ್ಡಗಟ್ಟಿ ದರೋಡೆ: ಮೂವರು ಆರೋಪಿಗಳ ಬಂಧನ

Spread the love

ಬೆಳಗಾವಿ: ನಗರದ ಹಿಂಡಲಗಾ ಬ್ರಿಡ್ಜ್‌ ಸಮೀಪದ ಹೈವೇ ಮೇಲೆ ಬುಲೆರೋ ವಾಹನವನ್ನು ಅಡ್ಡಗಟ್ಟಿ, ಚಾಲಕನ ಮೇಲೆ ಹಲ್ಲೆ ನಡೆಸಿ ಹಣ ಹಾಗೂ ಮೊಬೈಲ್ ಫೋನ್ ಕಸಿದುಕೊಂಡು ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಕ್ಟೋಬರ್ 15ರಂದು ನಸುಕಿನ ಜಾವ ಸುಮಾರು 2 ಗಂಟೆಗೆ ಈ ಘಟನೆ ನಡೆದಿತ್ತು. ಬೊಲೆರೋ ವಾಹನವನ್ನು ಅಡ್ಡಗಟ್ಟಿ ನಿಲ್ಲಿಸಿದ ಆರೋಪಿಗಳು, ಚಾಲಕನಿಗೆ ಹಲ್ಲೆ ನಡೆಸಿ ಆತನ ಬಳಿ ಇದ್ದ ಹಣ ಮತ್ತು ಮೊಬೈಲ್ ಫೋನ್ ಅನ್ನು ಬಲವಂತವಾಗಿ ಕಸಿದುಕೊಂಡು ಪರಾರಿಯಾಗಿದ್ದರು.

ಈ ಕುರಿತು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 227/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಕಲಂ 309(4)ರ ಪ್ರಕಾರ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು, ದರೋಡೆಗೀಡಾದ ವಸ್ತುಗಳು ಹಾಗೂ ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಬೆಳಗಾವಿಯ ಕಂಗ್ರಾಳಿ ಬಿ.ಕೆ. ಗ್ರಾಮದ ಸಂತಾಜಿ ಗಲ್ಲಿಯ ಪ್ರಕಾಶ ಮನೇಶ್ವರ ಕಟಾಬಳಿ (18), ಯಮನಾಪುರದ ಇಂದೂ ನಗರ ಪಾಟೀಲ ಗಲ್ಲಿಯ ಅಮಿತ ಚಂದ್ರಗೌಡ ಪಾಟೀಲ (20) ಹಾಗೂ ಕಂಗ್ರಾಳಿ ಬಿ.ಕೆ. ಗ್ರಾಮದ ಸಂತಾಜಿ ಗಲ್ಲಿಯ ಓಂ ಗಣೇಶ ಉಮೇಶ ಪೂಜಾರಿ (23) ಎಂದು ಗುರುತಿಸಲಾಗಿದೆ.

ಆರೋಪಿಗಳ ವಶದಿಂದ ದರೋಡೆ ಮಾಡಿದ್ದ ಸುಮಾರು ₹41 ಸಾವಿರ ಮೌಲ್ಯದ ವಿವೋ ವಿ-70 ಎಫ್‌ಇ ಮೊಬೈಲ್ ಫೋನ್, ಕೃತ್ಯಕ್ಕೆ ಬಳಸಿದ್ದ ಹೀರೋ ಸ್ಪ್ಲೆಂಡರ್ ಮೋಟಾರ್ ಸೈಕಲ್ (ಕೆಎ-22, ಇಜೆ-9323) ಹಾಗೂ ಆರೋಪಿಗಳ ಎರಡು ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪೊಲೀಸ್ ಆಯುಕ್ತರು ಹಾಗೂ ಉಪ ಪೊಲೀಸ್ ಆಯುಕ್ತರು (ಕಾ&ಸು), ಉಪ ಪೊಲೀಸ್ ಆಯುಕ್ತರು (ಅ&ಸಂ) ಮತ್ತು ಮಾರ್ಕೆಟ್ ಉಪವಿಭಾಗದ ಎಸಿಪಿ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.

ಪೊಲೀಸ್ ಇನ್ಸ್‌ಪೆಕ್ಟರ್ ಬಿ.ಆರ್. ಗಡ್ಡಕರ, ಪಿಎಸ್‌ಐಗಳಾದ ಆನಂದ ಆದಗೊಂಡ, ಶ್ರೀಶೈಲ್ ಹುಳಗೇರಿ, ಉದಯ ಪಾಟೀಲ, ಜೆ.ಐ. ದೇವಡಿ ಸೇರಿದಂತೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಆರೋಪಿಗಳನ್ನು ಪತ್ತೆಹಚ್ಚಿ ಪ್ರಕರಣ ಭೇದಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯವನ್ನು ಬೆಳಗಾವಿ ನಗರ ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ.


Spread the love

About Laxminews 24x7

Check Also

ಉಡುಪಿ ಶ್ರೀಕೃಷ್ಣ ಮಠಕ್ಕೆ ನಟಿ ಮಾಲಾಶ್ರೀ ಭೇಟಿ

Spread the loveಉಡುಪಿ: ಕನ್ನಡ ಚಿತ್ರರಂಗದ ಖ್ಯಾತ ನಟಿ ಮಾಲಾಶ್ರೀ ಅವರಿಂದು (ಅ.24) ಕುಟುಂಬ ಸಮೇತರಾಗಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ