Breaking News

ಧಾರವಾಡ ಕೋರ್ಟ್‌ ಆವರಣದಲ್ಲಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾದ ರೌಡಿಶೀಟರ್‌

Spread the love

ಧಾರವಾಡ: ಇಲ್ಲಿನ  ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಟೋರಿಯಸ್ ರೌಡಿಶೀಟರ್‌ ಒಬ್ಬ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದಾನೆ.

ಅರಬಾಝ್ ದೊಡಮನಿ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾದ ರೌಡಿಶೀಟರ್. ಈತ ಬೆಳಗಾವಿ ಹಿಂಡಲಗಾ ಜೈಲಿನಲ್ಲಿದ್ದ. ನ್ಯಾಯಾಲಯಕ್ಕೆ ಹಾಜರು ಪಡಿಸಲು ಕರೆದುಕೊಂಡು ಬಂದಾಗ, ಟೀ ಕುಡಿಯಬೇಕು ಎಂದು ಪೊಲೀಸರ ಬಳಿ ಹೇಳಿದ್ದ. ಟೀ ಕುಡಿಯಲು ಅಂಗಡಿಗೆ ಕರೆದೊಯ್ದಿದ್ದಾಗ, ಟೀ ಕುಡಿಯಲು ಆಗುತ್ತಿಲ್ಲ. ಕೈಗೆ ಹಾಕಿದ್ದ ಬೇಡಿ ತೆಗೆಯುವಂತೆ ಹೇಳಿದ್ದ.

ಬೇಡಿ ತೆಗೆಯುತ್ತಿದ್ದಂತೆ, ಮೊದಲೇ ತಯಾರಿ ಮಾಡಿಟ್ಟುಕೊಂಡಿದ್ದ ಬೈಕ್‌ನಲ್ಲಿ ಪರಾರಿಯಾಗಿದ್ದಾನೆ. ಅರಬಾಝ್ ವಿರುದ್ಧ ಹೊಡೆದಾಟ ಸೇರಿದಂತೆ ಹಲವಾರು ಪ್ರಕರಣಗಳು ದಾಖಲಾಗಿದ್ದವು. ಅದರಂತೆ ಪೊಲೀಸರು ಆತನನ್ನು ಬಂಧಿಸಿದ್ದರು.

ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪರಾರಿಯಾದ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

Spread the loveಮೈಸೂರು: ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ ಕಟೌಟ್ ಏಕಾಏಕಿ ಮುರಿದು ಬಿದ್ದಿದೆ. ಟಿಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ