Breaking News

ರೌಡಿಶೀಟರ್ ಆವಲಹಳ್ಳಿ ಮಂಜೇಶ್ ಹತ್ಯೆ ಪ್ರಕರಣ – ಠಾಣೆಗೆ ಹಾಜರಾದ ಐವರು ವಶಕ್ಕೆ

Spread the love

ಹಾಸನ: ಕುಖ್ಯಾತ ರೌಡಿಶೀಟರ್ ಆವಲಹಳ್ಳಿ ಮಂಜೇಶ್ ಹತ್ಯೆ ಪ್ರಕರಣದಲ್ಲಿ ಐವರು ಶಂಕಿತ ಆರೋಪಿಗಳು ಹಾಸನ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.

ಸಾಯಿನಾಥ್, ನಿಂಗರಾಜ್, ಶಶಿ, ಭರತ್ ಸೇರಿ ಐವರು ಪೊಲೀಸರ ಮುಂದೆ ಹಾಜರಾದ ಶಂಕಿತರು. ಸೋಮವಾರ ಮುಂಜಾನೆ ರೌಡಿಶೀಟರ್ ಮಂಜೇಶ್‌ನನ್ನು ಜಿಲ್ಲಾ ನ್ಯಾಯಾಲಯದ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈಯ್ಯಲಾಗಿತ್ತು. ಈ ಪ್ರಕರಣಕ್ಕೆ ಸಂಬಧಿಸಿದಂತೆ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದರು. ಈ ಬೆನ್ನಲ್ಲೇ ಬೆಂಗಳೂರು ಮೂಲದ ನಾಲ್ವರು ಹಾಗೂ ತುಮಕೂರು ಮೂಲದ ಓರ್ವ ಯುವಕ ಹಾಸನದ ಡಿವೈಎಸ್‌ಪಿ ಕಚೇರಿಗೆ ಬಂದಿದ್ದಾರೆ.

ಕೊಲೆ ಪ್ರಕರಣದಲ್ಲಿ ಪೊಲೀಸರು ನಮ್ಮನ್ನ ಹುಡುಕುತ್ತಿದ್ದಾರಂತೆ. ಹಾಗಾಗಿ ಪೊಲೀಸರು ನಮ್ಮ ಮನೆ ಬಳಿ ಬರುವುದು ಬೇಡ ಎಂದು ನಾವೇ ಠಾಣೆಗೆ ಬಂದಿದ್ದೇವೆ. ಕೊಲೆಯಾದ ದಿನ ನಾವು ಬೆಂಗಳೂರಿನಲ್ಲೇ ಇದ್ದೆವು. ಸ್ನೇಹಿತರ ಜೊತೆ ಕಾರವಾರಕ್ಕೆ ಪ್ರವಾಸ ಹೋಗಿದ್ದೆವು. ವಿನಾಃಕಾರಣ ಪ್ರಕರಣದಲ್ಲಿ ನಮ್ಮ ಹೆಸರು ಕೇಳಿಬಂದ ಹಿನ್ನೆಲೆ ನಾವೇ ಪೊಲೀಸರ ಎದುರು ಹಾಜರಾಗಲು ಬಂದಿದ್ದೇವೆ ಎಂದು ಹೇಳಿದ್ದಾರೆ.

ಐವರು ಯುವಕರು KA-05-NP-5249 ನಂಬರಿನ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಸಕಲೇಶಪುರದಿಂದ ಹಾಸನದ ಡಿವೈಎಸ್‌ಪಿ ಕಚೇರಿಗೆ ಬಂದಿದ್ದಾರೆ. ಐವರನ್ನ ಹಾಸನ ಡಿವೈಎಸ್‌ಪಿ ಗಂಗಾಧರಪ್ಪ ತೀವ್ರ ವಿಚಾರಣೆ ನಡೆಸಿದ್ದಾರೆ. ಶಂಕಿತ ಆರೋಪಿಗಳನ್ನ ಹಾಸನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜೂನ್ 7ರ ರಾತ್ರಿ ಹಾಸನ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ