Breaking News

ರೌಡಿಶೀಟರ್ ಆವಲಹಳ್ಳಿ ಮಂಜೇಶ್ ಹತ್ಯೆ ಪ್ರಕರಣ – ಹತ್ತು ಮಂದಿ ಅರೆಸ್ಟ್

Spread the love

ಹಾಸನ: ನಟೋರಿಯಸ್ ರೌಡಿಶೀಟರ್ ಆವಲಹಳ್ಳಿ ಮಂಜೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮೋಹನ್, ಶಶಿ, ಸಾಯಿನಾಥ್, ಭರತ್, ಲಿಂಗರಾಜ್, ರಾಕೇಶ್, ಆದಿತ್ಯ, ಆಕಾಶ್, ದಿಲೀಪ್ ಬಂಧಿತ ಆರೋಪಿಗಳಾಗಿದ್ದು, ಪ್ರಮುಖ ಆರೋಪಿಗಳ ಬಂಧನಕ್ಕೆ ಪೊಲೀಸರು ತಲಾಶ್ ನಡೆಸಿದ್ದಾರೆ. ಕೊಲೆ ಪ್ರಕರಣದಲ್ಲಿ ನಾವು ಆರೋಪಿಗಳಲ್ಲ ಎಂದು ಬೆಂಗಳೂರು ಮೂಲದ ನಾಲ್ವರು ಹಾಗೂ ತುಮಕೂರು ಮೂಲದ ಓರ್ವ ಯುವಕ ಪೊಲೀಸ್ ಠಾಣೆಗೆ ಹಾಜರಾಗಿದ್ದರು. ಕೊಲೆ ಪ್ರಕರಣದಲ್ಲಿ ನಮ್ಮನ್ನ ಹುಡುಕುತ್ತಿದ್ದಾರಂತೆ, ಹಾಗಾಗಿ ಪೊಲೀಸರು ನಮ್ಮ ಮನೆ ಬಳಿ ಬರುವುದು ಬೇಡ ಎಂದು ನಾವೇ ಪೊಲೀಸ್ ಠಾಣೆಗೆ ಬಂದಿದ್ದೇವೆ ಎಂದು ಹೇಳಿದ್ದರು.

ಇದಕ್ಕೂ ಮೊದಲು ಡಿವೈಎಸ್‌ಪಿ ಕಚೇರಿಗೆ ಬಂದು ಐವರು ಶರಣಾಗಿದ್ದರು. ಇವರೆಲ್ಲರೂ ಕೊಲೆ ಪ್ರಕರಣದ ಆರೋಪಿಗಳಾಗಿದ್ದು, ತೀವ್ರ ವಿಚಾರಣೆ ನಡೆಸಿದ ಪೊಲೀಸರ ಒಟ್ಟು ಹತ್ತು ಆರೋಪಿಗಳನ್ನು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ. ಜೂನ್ 7ರ ರಾತ್ರಿ ಹಾಸನದ ಜಿಲ್ಲಾ ಕೋರ್ಟ್ ಸಮೀಪ ಮಂಜೇಶ್ ಭೀಕರ ಹತ್ಯೆ ನಡೆದಿದ್ದು, ಹಾಸನ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ