Breaking News

ಬೆಳಗಾವಿಯ ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆಯಲ್ಲಿ 14 ಕೋಟಿ ಅಕ್ರಮ ಆಸ್ತಿ ಪತ್ತೆ

Spread the love

ಬೆಳಗಾವಿ: ನಗರಾಭಿವೃದ್ಧಿ ಕೋಶದ ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾ ದಾಳಿಯಲ್ಲಿ  ಕೋಟ್ಯಾಂತರ ರೂಪಾಯಿ ಅಕ್ರಮ ಆಸ್ತಿ ಪತ್ತೆಯಾಗಿದೆ.

ಲೋಕಾಯುಕ್ತ ದಾಳಿಯಲ್ಲಿ ಒಟ್ಟು 14 ಕೋಟಿಗೂ ಹೆಚ್ಚು ಅಕ್ರಮ ಆಸ್ತಿ ಪತ್ತೆಯಾಗಿದ್ದು, ಸ್ವತಹ ಅಧಿಕಾರಿಗಳೇ ಅಕ್ರಮ ಆಸ್ತಿ ಕಂಡು ತಬ್ಬಿಬ್ಬಾಗಿದ್ದಾರೆ. ಬೆಳಗಾವಿ  ನಗರದ ಆಂಜನೇಯ ನಗರ ಸೇರಿದಂತೆ ಏಳು ಕಡೆ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು.

DUDC ಎಇಇ ಅಜಯಸಿಂಗ್ ರಜಪೂತ ಮನೆಯ ಮೇಲೆ ದಾಳಿ ಮಾಡಲಾಗಿತ್ತು. ಬೆಳಗಾವಿಯಲ್ಲಿ ಮೂರು ಮನೆ, ಕಚೇರಿ, ಬ್ಯಾಂಕ್ ಲಾಕರ್ ಪರಿಶೀಲನೆ ನಡೆಸಿದ ವೇಳೆ ಸವದತ್ತಿ, ಹುಕ್ಕೇರಿ, ಹುಬ್ಬಳ್ಳಿಯಲ್ಲಿ 18 ನಿವೇಶನ ಪತ್ತೆಯಾಗಿದ್ದರೆ ಮನೆಯಲ್ಲಿ 5.96 ಕೆಜಿ ಮೌಲ್ಯದ ಚಿನ್ನ, 5 ಕೆಜಿ ಬೆಳ್ಳಿ, 3.12 ಕೋಟಿ ಡೆಪಾಸಿಟ್, ಐಷಾರಾಮಿ ಕಾರು, ಬೈಕ್‌ಗಳು ಪತ್ತೆಯಾಗಿವೆ.

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಹಿನ್ನೆಲೆ ತನಿಖೆ ಮುಂದುವರಿದಿದ್ದು, ಬ್ಯಾಂಕ್ ಲಾಕರ್ ಪರಿಶೀಲನೆ ಬಾಕಿ ಇದೆ. ಲಾಕರ್ ಪರಿಶೀಲನೆ ವೇಳೆ ಮತ್ತಷ್ಟು ಅಕ್ರಮ ಆಸ್ತಿ ಪತ್ತೆ ಸಾಧ್ಯತೆ ಇದ್ದು, ಕಳೆದ ಬುಧವಾರ(ಏ.07) ಅಧಿಕಾರಿಯ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ