Breaking News

ಇಡೀ ಕುಟುಂಬಕ್ಕೆ ವಾರಕ್ಕೆ 500 ರೂ. ಸಂಬಳ, ಶೆಡ್‌ನಲ್ಲಿ ಕೂಡಿ ಹಾಕಿ ಕೆಲಸ – 37 ಮಂದಿ ಜೀತದಿಂದ ಮುಕ್ತಿ

Spread the love

ಬಳ್ಳಾರಿ: ಹೊಸಪೇಟೆ  ತಾಲೂಕಿನ ನಂದಿಬಂಡಿಯಲ್ಲಿ ಜೀತಕ್ಕೆ ನೇಮಿಸಿಕೊಂಡಿದ್ದ ಒಡಿಶಾದ 37 ಮಂದಿಯನ್ನು ಅಧಿಕಾರಿಗಳು ಜೀತದಿಂದ ಮುಕ್ತಿ ನೀಡಿದ್ದಾರೆ.ಶ್ರೀನಿವಾಸ್, ಮಹಾದೇವ ರಾವ್ ಮತ್ತು ವೆಂಕಟ ಪ್ರಸಾದ್ ಎಂಬವರು ಕಾರ್ಮಿಕರನ್ನು ಶೆಡ್‌ನಲ್ಲಿ ಕೂಡಿ ಹಾಕಿ ಬಲವಂತವಾಗಿ ಇಟ್ಟಿಗೆ ಬಟ್ಟಿಯಲ್ಲಿ ಕೆಲಸ ಮಾಡಿಸಿಕೊಳ್ಳುತ್ತಿದ್ದರು. ಈ ಬಗ್ಗೆ ಬೆಳಗಾವಿಯ ಸ್ಪಂದನ ಸಂಸ್ಥೆ ವಿಜಯನಗರ  ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿತ್ತು. ಮಾಹಿತಿ ಆಧರಿಸಿ ಅಧಿಕಾರಿಗಳು ದಾಳಿ ನಡೆಸಿ, ಕಾರ್ಮಿಕರನ್ನು ಜೀತದಿಂದ ಮುಕ್ತಿಗೊಳಿಸಿದ್ದಾರೆ.

ಪ್ರತಿ ಕುಟುಂಬಕ್ಕೆ 40,000 ರೂ. ಹಣ ಮುಂಗಡವಾಗಿ ಹಣ ನೀಡಿ, ಶ್ರೀನಿವಾಸ್‌ ಕರೆದುಕೊಂಡು ಬಂದಿದ್ದ. ಬಲವಂತವಾಗಿ ಕೆಲಸ ಮಾಡಿಸಿಕೊಂಡು, ವಾರಕ್ಕೆ ಒಂದೊಂದು ಕುಟುಂಬಕ್ಕೆ 500 ರೂ. ಕೊಡುತ್ತಿದ್ದ ಎಂದು ತಿಳಿದು ಬಂದಿದೆ. ಈ ಸಂಬಂಧ ಮೂವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಎಲ್ಲಾ ಕಾರ್ಮಿಕರನ್ನು ರೈಲಿನ ಮೂಲಕ ಒಡಿಶಾಕ್ಕೆ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಕಳಿಸಿ ಕೊಟ್ಟಿದ್ದಾರೆ.


Spread the love

About Laxminews 24x7

Check Also

ವಿಧಾನ ಪರಿಷತ್‌ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ

Spread the love ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಇಂದು ಸಲೀಂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ