ಬೆಳಗಾವಿ: ನಗರದ ಆರ್ ಟಿಒ ಸರ್ಕಲ್ ಬಳಿ ಇರುವ ನೂತನ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಶಾಸಕ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿ ನವೀಕರಣಗೊಳಿಸಲಾಗುತ್ತಿರುವ ಕಾಮಗಾರಿ ಪರಿಶೀಲನೆ ನಡೆಸಿದರು.
ಕಚೇರಿ ಕಾಮಗಾರಿಯನ್ನು ಆದಷ್ಟು ಬೇಗನೆ ಮುಗಿಸಿ ಪಕ್ಷದ ಮುಖಂಡರಿಗೆ, ಪದಾಧಿಕಾರಿಗಳಿಗೆ ಮತ್ತು ಕಾರ್ಯಕರ್ತರಿಗೆ ಅನುಕೂಲವಾಗುವಂತೆ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ಗುತ್ತಿಗೆದಾರರಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ಇಂಜಿನೀಯರ್ ಚಂದು ಮುನ್ನವಳ್ಳಿಮಠ, ಮಹೇಶ ಕಡಪಟ್ಟಿ, ಮಲಗೌಡಾ ಪಾಟೀಲ್ ಸೇರಿದಂತೆ ಇತರರು ಇದ್ದರು