Breaking News

ಎಐ ಬಳಸಿ ರುಕ್ಮಿಣಿ ವಸಂತ್ ಬಿಕಿನಿ ಫೋಟೋ ವೈರಲ್ ಕೇಸ್ – ಮೂವರು ಅರೆಸ್ಟ್

Spread the love

ಬೆಂಗಳೂರು: ಕಾಂತಾರದ  ಕನಕವತಿ ನಟಿ ರುಕ್ಮಿಣಿ ವಸಂತ್ ಬಿಕಿನಿ ಫೋಟೋ ವೈರಲ್ ಕೇಸ್‌ನಲ್ಲಿ ಸೈಬರ್ ಕ್ರೈಂ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಾಗಲಕೋಟೆ ನಿವಾಸಿ ರವಿಕುಮಾರ್ (24), ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಚಂದ್ರಕಾಂತ್ (33) ಮತ್ತು ಬೆಂಗಳೂರು ಮೂಲದ ರಂಜಿತ್ (25) ಬಂಧಿತ ಆರೋಪಿಗಳು. 

ಈ ಸಂಬಂಧ ರುಕ್ಮಿಣಿ ವಸಂತ್ ನೀಡಿದ ದೂರಿನ ಮೇರೆಗೆ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನಲ್ಲಿ ಎಐ ತಂತ್ರಜ್ಞಾನ ಬಳಸಿ ನನ್ನ ಫೋಟೋವನ್ನು ಬಿಕಿನಿ ರೀತಿ ಸೃಷ್ಟಿ ಮಾಡಿದ್ದಾರೆ. ಡೀಪ್‌ಫೇಕ್ ತಂತ್ರಜ್ಞಾನ ಬಳಸಿ ಬೇರೆಯೊಬ್ಬರ ದೇಹಕ್ಕೆ ನನ್ನ ಮುಖ ಸೇರಿಸಿದ್ದಾರೆ. ಈ ರೀತಿ ನಕಲಿ ವಿಡಿಯೋ ಮತ್ತು ಫೋಟೋವನ್ನು ಸೃಷ್ಟಿ ಮಾಡಿದ್ದಾರೆ. ನನ್ನ ಗೌರವಕ್ಕೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ ಎಂದು ಉಲ್ಲೇಖಿಸಿದ್ದರು.

ದೂರಿನ ಆಧಾರದ ತನಿಖೆಯನ್ನು ಚುರುಕುಗೊಳಿಸಿದ್ದ ಸೈಬರ್ ಕ್ರೈಮ್‌ ಪೊಲೀಸರು ಸದ್ಯ ಮೂವರನ್ನು ಬಂಧಿಸಿದ್ದಾರೆ. ಈ ವೇಳೆ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಮೂವರನ್ನೂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಪ್ರಕರಣದ ಆಳ ಮತ್ತು ಇದರ ಹಿಂದೆ ಬೇರೆ ಯಾರಾದರೂ ಇದ್ದಾರೆಯೇ ಎಂಬ ಜಾಲವನ್ನು ಭೇದಿಸಲು ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ