Breaking News
Home / Uncategorized / ರೇಣುಕಾ ಯಲ್ಲಮ್ಮದೇವಿ ಸೇರಿದಂತೆ ಮೂರು ದೇವಾಲಯಗಳಿಗೆ ಜುಲೈ 31ರ ತನಕ ಭಕ್ತರ ಪ್ರವೇಶ ನಿಷೇಧಿಸಲಾಗಿದೆ. ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲಾಡಳಿತ ಈ ಆದೇಶ ನೀಡಿದೆ.

ರೇಣುಕಾ ಯಲ್ಲಮ್ಮದೇವಿ ಸೇರಿದಂತೆ ಮೂರು ದೇವಾಲಯಗಳಿಗೆ ಜುಲೈ 31ರ ತನಕ ಭಕ್ತರ ಪ್ರವೇಶ ನಿಷೇಧಿಸಲಾಗಿದೆ. ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲಾಡಳಿತ ಈ ಆದೇಶ ನೀಡಿದೆ.

Spread the love

ಬೆಳಗಾವಿ, ಜೂನ್ 30 : ಸವದತ್ತಿ ರೇಣುಕಾ ಯಲ್ಲಮ್ಮದೇವಿ ಸೇರಿದಂತೆ ಮೂರು ದೇವಾಲಯಗಳಿಗೆ ಜುಲೈ 31ರ ತನಕ ಭಕ್ತರ ಪ್ರವೇಶ ನಿಷೇಧಿಸಲಾಗಿದೆ. ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲಾಡಳಿತ ಈ ಆದೇಶ ನೀಡಿದೆ.

ಬೆಳಗಾವಿ ಜಿಲ್ಲಾಧಿಕಾರಿ ಡಾ. ಎಸ್. ಬಿ. ಬೊಮ್ಮನಹಳ್ಳಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ಕೊರೊನಾ ಸೋಂಕು ಹರಡುವ ಆತಂಕ ಮತ್ತು ಭಕ್ತರ ಆರೋಗ್ಯದ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಸವದತ್ತಿ ರೇಣುಕಾ ಯಲ್ಲಮ್ಮ ದೇವಿ, ಜೋಗುಳಬಾವಿ ಸತ್ತೆಮ್ಮದೇವಿ, ರಾಯಭಾಗದ ಚಿಂಚಲಿ ಮಾಯಕ್ಕ ದೇವಿ ದೇವಾಯಗಳಿಗೆ ಜುಲೈ 31ರ ತನಕ ಭಕ್ತರು ಭೇಟಿ ನೀಡುವಂತಿಲ್ಲ. ಈಗಾಗಲೇ ಭಕ್ತರ ಪ್ರವೇಶಕ್ಕೆ ನಿರ್ಬಂಧವಿದ್ದು, ಅದನ್ನು ಇನ್ನೂ ಒಂದು ತಿಂಗಳು ವಿಸ್ತರಣೆ ಮಾಡಲಾಗಿದೆ.

ಈ ದೇವಾಲಯಗಳ ಆಡಳಿತ ಮಂಡಳಿಯವರು ನಿತ್ಯದ ಧಾರ್ಮಿಕ ವಿಧಿ ವಿಧಾನಗಳನ್ನು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ನಡೆಸಲು ವಿನಾಯಿತಿ ನೀಡಲಾಗಿದೆ. ಆದರೆ ಯಾವುದೇ ಭಕ್ತರು ದೇವಾಲಯಕ್ಕೆ ಭೇಟಿ ನೀಡುವಂತಿಲ್ಲ.

ಬೆಳಗಾವಿ ಜಿಲ್ಲೆಯ ದೇವಾಲಯಗಳಿಗೆ ಮಹಾರಾಷ್ಟ್ರದಿಂದಲೂ ಹಲವಾರು ಭಕ್ತರು ಆಗಮಿಸುತ್ತಾರೆ. ಪಕ್ಕದ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣ ಹೆಚ್ಚಿರುವುದರಿಂದ ಭಕ್ತರ ಭೇಟಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 326. ಸೋಮವಾರ ಜಿಲ್ಲೆಯಲ್ಲಿ ಯಾವುದೇ ಹೊಸ ಪ್ರಕರಣಗಳು ಪತ್ತೆಯಾಗಿಲ್ಲ.


Spread the love

About Laxminews 24x7

Check Also

ಕ್ಯಾನ್ಸರ್‌ ರೋಗಿಗಳಿಗೆ ಸಿಹಿಸುದ್ದಿ: 72 ಲಕ್ಷ ರೂ. ನ Cancer ಔಷಧ ಇನ್ಮುಂದೆ 3 ಲಕ್ಷಕ್ಕೆ ಸಿಗುತ್ತೆ

Spread the love ನವದೆಹಲಿ : ಕ್ಯಾನ್ಸರ್‌ ರೋಗಿಗಳಿಗೆ ಝೈಡಸ್‌ ಕಂಪನಿ ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. ಹೌದು 72 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ