Breaking News

ಬೆಳಗಾವಿಯಲ್ಲಿ ಏಪ್ರಿಲ್ 14 ರಂದು ಮದ್ಯ ಮಾರಾಟ ನಿಷೇಧ: ಪೊಲೀಸ್ ಆಯುಕ್ತರ ಆದೇಶ

Spread the love

ವಿಶ್ವರತ್ನ ಡಾ . ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆಯ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಮತ್ತು ತಾಲೂಕಿನಾದ್ಯಂತ ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಿ ಪೊಲೀಸ್ ಆಯುಕ್ತರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಬೆಳಗಾವಿ ನಗರದಲ್ಲಿ ಏಪ್ರಿಲ್ 14 ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಪೊಲೀಸ್ ಇಲಾಖೆ ಸನ್ನದ್ಧವಾಗಿದೆ. ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಹಾಗೂ ಪೊಲೀಸ್ ಆಯುಕ್ತರಾದ ಬೊರಸೆ ಭೂಷಣ್ ಗುಲಬರಾವ್ ಅವರು ಕರ್ನಾಟಕ ಅಬಕಾರಿ ಕಾಯ್ದೆ ಮತ್ತು ಪೊಲೀಸ್ ಕಾಯ್ದೆಯಡಿ ತಮಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಅಂದು ಬೆಳಗಾವಿ ತಾಲೂಕಿನಾದ್ಯಂತ ‘ಡ್ರೈ ಡೇ’ ಘೋಷಿಸಿದ್ದಾರೆ.
ದಿನಾಂಕ 14/04/2026 ರಂದು ಬೆಳಗ್ಗೆ 06:00 ಗಂಟೆಯಿಂದ ಮಧ್ಯರಾತ್ರಿ 12:00 ಗಂಟೆಯವರೆಗೆ ಜಿಲ್ಲೆಯ ಎಲ್ಲಾ ಮದ್ಯದ ಅಂಗಡಿಗಳು, ವೈನ್ ಶಾಪ್‌ಗಳು, ಬಾರ್ ಮತ್ತು ರೆಸ್ಟೋರೆಂಟ್ ಹಾಗೂ ಕ್ಲಬ್‌ಗಳನ್ನು ಕಡ್ಡಾಯವಾಗಿ ಮುಚ್ಚತಕ್ಕದ್ದು. ಅಲ್ಲದೆ ಕೆಎಸ್‌ಬಿಸಿಎಲ್ ಡಿಪೋಗಳಿಂದ ಮದ್ಯದ ಸರಬರಾಜನ್ನು ಕೂಡ ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ. ಈ ಅವಧಿಯಲ್ಲಿ ಮದ್ಯ ಮಾರಾಟ ಅಥವಾ ಸಾಗಾಣಿಕೆ ಮಾಡುವುದು ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆಯುಕ್ತರು ಎಚ್ಚರಿಸಿದ್ದಾರೆ.


Spread the love

About Laxminews 24x7

Check Also

ಬಾಣಂತಿ, ಮಗು ಸಾವು – ಬಿಮ್ಸ್ ವೈದ್ಯರ ನಿರ್ಲಕ್ಷ್ಯ ಆರೋಪ

Spread the loveಬೆಳಗಾವಿ: ಬಿಮ್ಸ್ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಹಾಗೂ ಮಗು ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ. ಬೆಳಗಾವಿ ಜಿಲ್ಲೆಯ ತುರಮರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ