ಶಿವಶಂಕರಪ್ಪಗಿಂತ ಹೆಚ್ಚು ಮತಗಳ ಅಂತರದಿಂದ ಸಮರ್ಥ್ ಗೆಲುವು – ಡಿಕೆಶಿ

Spread the love

ಬೆಂಗಳೂರು: ದಾವಣಗೆರೆಯಲ್ಲಿ ದಕ್ಷಿಣದಲ್ಲಿ ಶಾಮನೂರು ಶಿವಶಂಕರಪ್ಪ ಅವರಿಗಿಂತ ಹೆಚ್ಚು ಮತಗಳ ಅಂತರದಿಂದ ಸಮರ್ಥ್ ಗೆಲುವು ಸಾಧಿಸುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ತಿಳಿಸಿದ್ದಾರೆ.

ಮಾಧ್ಯಮದರೊಂದಿಗೆ ಮಾತನಾಡುವಾಗ ಅಲ್ಪಸಂಖ್ಯಾತರ ಮತಗಳು ವಿಭಜನೆಯಾಗುತ್ತವೆಯೇ ಎಂದು ಕೇಳಿದಾಗ, ಯಾವುದೇ ಕಾರಣಕ್ಕೂ ವಿಭಜನೆ ಆಗುವುದಿಲ್ಲ. ಬೇರೆ ಸಮುದಾಯಗಳೂ ಆಗುವುದಿಲ್ಲ. ಶಿವಶಂಕರಪ್ಪ ಅವರಿಗಿಂತ ಹೆಚ್ಚು ಮತಗಳ ಅಂತರದಿಂದ ಅವರ ಮೊಮ್ಮಗ ಸಮರ್ಥ್  ಗೆಲ್ಲುತ್ತಾರೆ. ಅವರು ಸಾಕಿದಂತಹ ಮಗ. ಗೆಲ್ಲುತ್ತಾನೆ ಎನ್ನುವ ವಿಶ್ವಾಸವಿದೆ. ಇಡೀ ರಾಜ್ಯ ನೋಡುವಂತೆ ಆ ಕುಟುಂಬ ದಾವಣಗೆರೆಗೆ ಕೊಡುಗೆ ಕೊಟ್ಟಿದೆ. ಜನ ಅವರನ್ನ ಸ್ಮರಿಸುತ್ತಿದ್ದಾರೆ ಎಂದಿದ್ದಾರೆ.

ಉಪಚುನಾವಣೆಯಲ್ಲಿ ಒಂದಷ್ಟು ಜನರ ಅಸಮಾಧಾನ ಹಾಗೂ ಅಮಾನತು ಬಗ್ಗೆ ಕೇಳಿದಾಗ, ಅಮಾನತಿಗೆ ನಾನು ಸಹಿ ಹಾಕಿಲ್ಲ. ಸ್ಥಳೀಯವಾಗಿ ಇದು ಆಗಿದೆ. ನಾನು ಹಾಗೂ ಮುಖ್ಯಮಂತ್ರಿಯವರು ಇದರ ಬಗ್ಗೆ ಮಾತನಾಡಿದ್ದೇವೆ. ಈ ವಿಚಾರವನ್ನ ಬಹಿರಂಗಗೊಳಿಸುವುದಿಲ್ಲ. ಜಮೀರ್, ಜಬ್ಬಾರ್, ನಜೀರ್ ಅವರು ಎಲ್ಲಾ ಕಾಂಗ್ರೆಸ್ ನಾಯಕರು ಪಕ್ಷದ ಏನು ಹೇಳುತ್ತದೆಯೋ ಅದನ್ನು ಕೇಳುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಪೈಲ್ವಾನ್, ಉಸ್ತಾದ್ ಇರಬಹುದು ಎಲ್ಲರೂ ನಮ್ಮವರೇ. ಚುನಾವಣೆ ಸಮಯದಲ್ಲಿ ಒಂದಷ್ಟು ಭಿನ್ನಾಭಿಪ್ರಾಯ ಬಂದೇ ಬರುತ್ತದೆ. ನಾವು ಅದನ್ನು ನಿಭಾಯಿಸುತ್ತೇವೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ, ತನಿಖೆಯಲ್ಲಿ ನಟಿಯೊಬ್ಬರು ಹನಿಟ್ರ್ಯಾಪ್ ಮಾಡಿರೋದು ಪತ್ತೆ..!!

Spread the loveಉದ್ಯಮಿ ಸಿಜೆ ರಾಯ್ ಆತ್ಮ**ತ್ಯೆ ಪ್ರಕರಣ, ತನಿಖೆಯಲ್ಲಿ ನಟಿಯೊಬ್ಬರು ಹನಿಟ್ರ್ಯಾಪ್ ಮಾಡಿರೋದು ಪತ್ತೆಯಾಗಿದೆ. ಉದ್ಯಮಿ ಬಳಿಯಿಂದ ಹಣಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ