Breaking News

ಉತ್ತರ ವಲಯ ಐಜಿಪಿಯಾಗಿ ಸಂದೀಪ ಪಾಟೀಲ ಅಧಿಕಾರ ಸ್ವೀಕಾರ

Spread the love

ಬೆಳಗಾವಿ : ಉತ್ತರ ವಲಯ ನೂತನ ಪೊಲೀಸ್ ಮಹಾನಿರೀಕ್ಷಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಸಂದೀಪ ಪಾಟೀಲ ಗುರುವಾರ ಇಲ್ಲಿನ ಕೇಂದ್ರ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು. ಈವರೆಗಿನ ಉತ್ತರ ವಲಯ ಐಜಿಪಿ ಡಾ.ಚೇತನಸಿಂಗ್ ರಾಥೋರ್, ಪಾಟೀಲರಿಗೆ  ಅಧಿಕಾರ ಹಸ್ತಾಂತರಿಸಿದರು.
ಬಳಿಕ ಉತ್ತರ ವಲಯದ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಕಾನೂನು-ಸುವ್ಯವಸ್ಥೆ, ಅಪರಾಧ ನಿಯಂತ್ರಣ, ಗಡಿ ಭಾಗದ ಭದ್ರತಾ ವ್ಯವಸ್ಥೆ ಹಾಗೂ ಪ್ರಮುಖ ಪ್ರಕರಣಗಳ ಕುರಿತು ಪ್ರಾಥಮಿಕ ಮಾಹಿತಿ ಪಡೆದುಕೊಂಡ ಸಂದೀಪ ಪಾಟೀಲ, ಅಧೀನ ಅಧಿಕಾರಿ ಮತ್ತು ಸಿಬ್ಬಂದಿಗಳ ಪರಿಚಯ ಮಾಡಿಕೊಂಡರು.
ಈ ಹಿಂದೆ ಬೆಳಗಾವಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸಂದೀಪ ಪಾಟೀಲ ಉತ್ತರ ಕರ್ನಾಟಕ ಭಾಗದಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಹೀಗಾಗಿ, ಇಂಥವರು ಮಹಾರಾಷ್ಟ್ರ ಮತ್ತು ಗೋವಾ ಗಡಿಗೆ ಹೊಂದಿಕೊಂಡಿರುವ ರಾಜ್ಯದ ಅತ್ಯಂತ ಸೂಕ್ಷ್ಮ ವಲಯಕ್ಕೆ ಐಜಿಪಿಯಾಗಿ ಬಂದಿರುವುದರಿಂದ ಅನುಭವ ಸಂಪನ್ನ ಅಧಿಕಾರಿ ಎಂಬ ಕಾರಣಕ್ಕೆ ಇವರ ನೇಮಕ ಮಹತ್ವ ಪಡೆದುಕೊಂಡಿದೆ.

Spread the love

About Laxminews 24x7

Check Also

ಬಸ್ ತಡೆದು ಕರೋಶಿ ವಿದ್ಯಾರ್ಥಿಗಳ ಪ್ರತಿಭಟನೆ

Spread the loveಚಿಕ್ಕೋಡಿ; ತಾಲೂಕಿನ ಕರೋಶಿ ಗ್ರಾಮದಲ್ಲಿ ಬಸ್‌ಗಳು ನಿಲ್ಲದೆ ಇರುವುದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಮಂಗಳವಾರ ಹುಕ್ಕೇರಿ-ಚಿಕ್ಕೋಡಿ ಮಾರ್ಗದ ಸಾರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ