ಬೆಳಗಾವಿ ನಗರದಲ್ಲಿ ಸಂಗೊಳ್ಳಿ ರಾಯಣ್ಣನ ಜಯಂತಿ ಪ್ರಯುಕ್ತ ಹುತಾತ್ಮ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.ನಗರದಲ್ಲಿ ಜನೇವರಿ 26 ಗಣರಾಜ್ಯೋತ್ಸವ ಸಂದರ್ಭದಲ್ಲಿ ಸಂಗೊಳ್ಳಿ ರಾಯಣ್ಣನವರ ಜಯಂತಿ ಪ್ರಯುಕ್ತ ಹುತಾತ್ಮ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಬಸವರಾಜ ಕಟ್ಟಿಮನಿ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ್ ಕಾರಜೋಳ್ ಭಾಗಿಯಾಗಿದ್ದರು.ಈ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಚಿವ ಗೋವಿಂದ ಕಾರಜೋಳ, ಗಣರಾಜ್ಯೋತ್ಸವದ ಸಂದರ್ಭದಲ್ಲಿ ನಾಡಿನಾದ್ಯಂತ ಸಂಗೊಳ್ಳಿ ರಾಯಣ್ಣನವರ ಹುತಾತ್ಮ ದಿನವನ್ನು ಆಚರಿಸುತ್ತಿದ್ದೇವ. ರಾಯಣ್ಣ ದೇಶಕ್ಕಾಗಿ, ಹಾಗೂ ಕಿತ್ತೂರು ಸಂಸ್ಥಾನಕ್ಕಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡಂತಹ ವ್ಯಕ್ತಿಯಾಗಿದ್ದಾರೆ. ಇನ್ನು ನಮ್ಮ ರಾಜ್ಯ ಸರಕಾರ ಸಂಗೊಳ್ಳಿ ರಾಯಣ್ಣನವರ ಹೆಸರನ್ನು ಅಜರಾಮರವಾಗಿಸಲು ಕಾರ್ಯಗಳನ್ನು ಮಾಡುತ್ತಿದೆ. ಈಗಾಗಲೇ ರಾಜ್ಯ ಸರಕಾರ ರಾಯಣ್ಣನ ಹೆಸರಿನಲ್ಲಿ ಸೈನಿಕ ಶಾಲೆಯನ್ನು ತೆರೆದು ಮಕ್ಕಳನ್ನು ದೇಶಕ್ಕೆ ಒಳ್ಳಯ ನಾಗರಿಕರನ್ನು ತಯಾರಿ ಮಾಡುವ ನಿಟ್ಟಿನಲ್ಲಿ ತಯಾರಿ ಮಾಡಲು ನಿರ್ಧಾರ ಮಾಡಿದೆ.ಈ ನಿಟ್ಟಿನಲ್ಲಿ ಸೈನಿಕ ಶಾಲೆಯನ್ನು ಇನ್ನು ಕೆಲವೇ ತಿಂಗಳುಗಳಲ್ಲಿ ಲೋಕಾರ್ಪಣೆ ಮಾಡಲಾಗುವುದು. ಇನ್ನು ಭೂಮಿಯ ಮೇಲೆ ಮನುಷ್ಯರು ಇರುವ ವರೆಗೂ ರಾಯಣ್ಣನ ಹೆಸರನ್ನು ಅಜರಾಮರವಾಗಿಸಲು ಎಲ್ಲಾ ಕಾರ್ಯಗಳನ್ನು ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಅಶೋಕ್ ದುಡಗುಂಟಿ, ಎ.ಸಿ ಕರಲಿಂಗನವರ್, ಪ್ರೋ. ಕೋಲಕಾರ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವಿದ್ಯಾವತಿ ಭಜಂತ್ರಿ ಮೊದಲಾಧ ಗಣ್ಯರು ಉಪಸ್ಥಿತರಿದ್ದರು.
