Breaking News

ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿ ಆಚರಣೆ ಹಾಗೂ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ!

Spread the love

ಸವದತ್ತಿ ಪಟ್ಟಣದ ಗುರು ಭವನದಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಹಾರಾಜರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಇದೇ ಸುಸಂದರ್ಭದಲ್ಲಿ, ನಮ್ಮ ಕ್ಷೇತ್ರದ ಶ್ರೀ ಯಲ್ಲಮ್ಮನ ಗುಡ್ಡ ತಾಂಡಾವನ್ನು ಕಂದಾಯ ಗ್ರಾಮವನ್ನಾಗಿ ಘೋಷಿಸಿದ ಬೆನ್ನಲ್ಲೇ, ಅಲ್ಲಿನ ಸುಮಾರು 320 ಕುಟುಂಬಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲಾಯಿತು. ದಶಕಗಳ ಕಾಲದ ಜನರ ಭೂಮಿಯ ಹಕ್ಕಿನ ಕನಸು ಇಂದು ನನಸಾಗಿರುವುದು ನನಗೆ ಅಪಾರ ತೃಪ್ತಿ ತಂದಿದೆ.

ಇದು ನಮ್ಮ ಸರ್ಕಾರದ ಜನಪರ ಆಡಳಿತಕ್ಕೆ ಸಾಕ್ಷಿ. ಹಕ್ಕು ಪತ್ರ ಪಡೆಯುವುದರೊಂದಿಗೆ ನಿಮ್ಮ ಆಸ್ತಿಗೆ ಈಗ ಕಾನೂನುಬದ್ಧ ಗೌರವ ಸಿಕ್ಕಿದೆ. ಮುಂದಿನ ದಿನಗಳಲ್ಲಿ ತಾಂಡಾಗಳಲ್ಲಿ ಶಾಲೆ, ರಸ್ತೆ ಹಾಗೂ ಕುಡಿಯುವ ನೀರಿನಂತಹ ಮೂಲಸೌಕರ್ಯಗಳನ್ನು ಆದ್ಯತೆಯ ಮೇರೆಗೆ ಒದಗಿಸಲು ನಾನು ಬದ್ಧನಾಗಿದ್ದೇನೆ.

ಸಂತ ಸೇವಾಲಾಲ್ ಮಹಾರಾಜರ ತತ್ವಗಳು ಕೇವಲ ಒಂದು ಸಮಾಜಕ್ಕೆ ಸೀಮಿತವಲ್ಲ, ಅವು ಇಡೀ ಮಾನವಕುಲಕ್ಕೆ ದಾರಿದೀಪ. ಅವರ ಅಹಿಂಸೆ ಮತ್ತು ಶಿಸ್ತಿನ ಹಾದಿಯಲ್ಲಿ ನಾವು ಸಾಗಬೇಕಿದೆ.

​ಬಂಜಾರ ಸಮಾಜದ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಮ್ಮ ಕ್ಷೇತ್ರ ಸದಾ ಮುಂಚೂಣಿಯಲ್ಲಿರಲಿದೆ. ತಾಂಡಾ ನಿವಾಸಿಗಳ ಬದುಕಿನಲ್ಲಿ ಹೊಸ ಭರವಸೆ ಮೂಡಿಸುವ ಇಂತಹ ಜನಪರ ಕಾರ್ಯಗಳು ನಮ್ಮ ಸರ್ಕಾರದ ಆದ್ಯತೆಯಾಗಿದೆ.

ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಬಂಜಾರ ಸಮಾಜದ ಮುಖಂಡರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಸವದತ್ತಿ ಯಲ್ಲಮ್ಮ ದೇವಸ್ಥಾನದ ನೇಮಕಾತಿ ಹಾಗೂ ಮುಜರಾಯಿ ಇಲಾಖೆ ಸಿಬ್ಬಂದಿಗಳ ಹಿತರಕ್ಷಣೆಗಾಗಿ ವಿಧಾನಸಭೆಯಲ್ಲಿ ಧ್ವನಿ!

Spread the love​ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸಭಾ ಬಜೆಟ್ ಅಧಿವೇಶನದಲ್ಲಿ, ಸವದತ್ತಿ ಯಲ್ಲಮ್ಮ ಕ್ಷೇತ್ರದ ಪರವಾಗಿ ಧಾರ್ಮಿಕ ದತ್ತಿ ಇಲಾಖೆಯ (ಮುಜರಾಯಿ) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ