ಸವದತ್ತಿ: ನಗರದ ಕೆಎಲ್ಇ ಸಂಸ್ಥೆಯ ಎಸ್ವಿಎಸ್ ಬೆಳ್ಳುಬ್ಬಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪರವಾಗಿ ಏರ್ಪಡಿಸಿದ್ದ ಹ್ಯಾಂಡ್ಬಾಲ್ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಯೂನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿದ್ದಾರೆ. ಬಿಎ ತೃತೀಯ ವರ್ಷದ ವಿದ್ಯಾರ್ಥಿನಿ ಸರಸ್ವತಿ ಮಾದರ ಮಹಿಳಾ ಹ್ಯಾಂಡ್ಬಾಲ್ ತಂಡಕ್ಕೆ ಆಯ್ಕೆಯಾಗಿದ್ದು, ಮಾ.22ರಿಂದ 26ರವರೆಗೆ ಕೇರಳದ ಮಹಾತ್ಮಗಾಂಧಿ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ದಣ ಭಾರತ ಅಂತರ ವಿಶ್ವವಿದ್ಯಾಲಯಗಳ ಮಹಿಳಾ ಹ್ಯಾಂಡ್ಬಾಲ್ ಪಂದ್ಯಾವಳಿಯಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ತಂಡದಿವನ್ನು ಪ್ರತಿನಿಧಿಸಲಿದ್ದಾರೆ. ಬಿಕಾಂ ತೃತೀಯ ವರ್ಷದ ವಿದ್ಯಾರ್ಥಿ ಜಾವೇದ್ ನದ್ಾ ಪುರುಷರ ಹ್ಯಾಂಡ್ಬಾಲ್ ತಂಡಕ್ಕೆ ಆಯ್ಕೆಯಾಗಿದ್ದು, ಮಾ. 17ರಿಂದ 21ರವರೆಗೆ ತಮಿಳುನಾಡಿನ ವೆಲ್ಲೂರಿನ ವಿಐಟಿ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ದಣ ಭಾರತ ಅಂತರ ವಿಶ್ವವಿದ್ಯಾಲಯಗಳ ಪುರುಷರ ಹ್ಯಾಂಡ್ಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ.
Laxmi News 24×7