Breaking News

ಸಾಲ ಮಾಡಿ ಬಜೆಟ್‌ ಮಂಡಿಸಿದ್ದು ಇದೇ ಮೊದಲ ಬಾರಿಯಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Spread the love

ಕಳೆದ ಐವತ್ತು ವರ್ಷದಿಂದ ಸಾಲ ಮಾಡಿಯೇ ಬಜೆಟ್‌ ಮಂಡಿಸಲಾಗುತ್ತಿದೆ. ಸಿಎಂ ಸಿದ್ದರಾಮಯ್ಯನವರಷ್ಟೇ ಸಾಲ ಮಾಡಿ ಬಜಟ್‌ ಮಂಡನೆ ಮಾಡಿಲ್ಲ. ಬಿಜೆಪಿಯವರು ಸಾಲ ಮಾಡಿಯೇ ಬಜೆಟ್‌ ಮಂಡಿಸಿದ್ದು, ಈಗ ಟೀಕೆ ಮಾಡಿದರೆ ಪ್ರಯೋಜನವಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.

ಇಂದು ಬೆಂಗಳೂರಿನಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು, ಲೋಕೋಪಯೋಗಿ ಇಲಾಖೆ ಬಜೆಟ್’ನಲ್ಲಿ ಸೇತುವೆಗಳಿಗೆ ಬೇಡಿಕೆಯಿಟ್ಟಿತ್ತು. ಅದಕ್ಕೆ ಅನುದಾನವನ್ನು ನೀಡಿದ್ದಾರೆ. ಕಳೆದ 20 ವರ್ಷಗಳಲ್ಲಿ ಯಾವುದೇ ಸರ್ಕಾರಗಳು ಸೇತುವೆಗಳಿಗೆ ಅಷ್ಟಾಗಿ ಪ್ರಾಧಾನ್ಯತೆ ನೀಡಿರಲಿಲ್ಲ. ಆದರೇ, ನಮ್ಮ ಸರ್ಕಾರ ನೀಡಿದೆ. ಈ ಬಾರಿಯೂ ಅದಕ್ಕೆ ಮುಂದುವರೆಸಿದ್ದಾರೆ. ನಿಯಮಿತ ಯೋಜನೆಗಳಲ್ಲಿ ಅನುದಾನವನ್ನು ನೀಡಲಾಗಿದೆ. ಕಳೆದ ಬಾರಿಗಿಂತ ಹೆಚ್ಚಿಗೆ ನೀಡಿದ್ದಾರೆ. ಬೈಟ್

ಕಳೆದ ಐವತ್ತು ವರ್ಷದಿಂದ ಸಾಲ ಮಾಡಿಯೇ ಬಜೆಟ್‌ ಮಂಡಿಸಲಾಗುತ್ತಿದೆ. ಸಿಎಂ ಸಿದ್ದರಾಮಯ್ಯನವರಷ್ಟೇ ಸಾಲ ಮಾಡಿ ಬಜಟ್‌ ಮಂಡನೆ ಮಾಡಿಲ್ಲ. ಬಿಜೆಪಿಯವರು ಸಾಲ ಮಾಡಿಯೇ ಬಜೆಟ್‌ ಮಂಡಿಸಿದ್ದು, ಈಗ ಟೀಕೆ ಮಾಡಿದರೆ ಪ್ರಯೋಜನವಿಲ್ಲ ಸಾಲ ಮಾಡದೇ ಬಜೆಟ್‌ ಮಂಡನೆ ಮಾಡುಲು ಸಾಧ್ಯವಿಲ್ಲ. ಬೇರೆ ರಾಜ್ಯಗಳಲ್ಲಿಯೂ ಇದೇ ಪ್ರವೃತ್ತಿ ಇದೆ. ಕೇಂದ್ರ ಸರ್ಕಾರವೂ ಸಾಲ ಮಡಿಯೇ ಬಜೆಟ್‌ ಮಂಡಿಸುತ್ತದೆ. ಬಿಜೆಪಿಯವರು ರಾಜಕೀಯವಾಗಿ ಮಾತನಾಡುತ್ತಾರೆ ಅಷ್ಟೇ ಎಂದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ