Breaking News

ಕೇಂದ್ರ ಬಜೆಟ್‌ ರೈತರು, ಯುವಕರು, ಉದ್ಯೋಗ ಸೃಷ್ಟಿಗೆ ಪೂರಕವಾಗಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Spread the love

ಬೆಳಗಾವಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ 2026-27ನೇ ಸಾಲಿನ ಕೇಂದ್ರ ಬಜೆಟ್ ರೈತರು, ಯುವಕರು ಮತ್ತು ಉದ್ಯೋಗ ಸೃಷ್ಟಿಗೆ ಪೂರಕವಾಗಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಟೀಕಿಸಿದ್ದಾರೆ.

2026-27ನೇ ಸಾಲಿನ ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಗೆ ಈಗಾಗಲೇ ಘೋಷಿಸಲಾಗಿರುವ 5,300 ಕೋಟಿ ರೂ. ಇನ್ನು ಬಿಡುಗಡೆಯಾಗಿಲ್ಲ, ಈ ಬಾರಿಯೂ ಇದರ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪಿಸಿಲ್ಲ. ಕರ್ನಾಟಕಕ್ಕೆ ಹಣಕಾಸು ಆಯೋಗ ಶಿಫಾರಸು ಮಾಡಿರುವ 11,495 ಕೋಟಿ ರೂ. ಅನುದಾನ ಬಿಡುಗಡೆಗೆ ಬೇಡಿಕೆ ಇತ್ತು, ಈಗ 16ನೇ ಹಣಕಾಸು ಆಯೋಗದ ಶಿಫಾರಸ್ಸು ಶುರುವಾಗಿದ್ದು ಬಹುತೇಕ ಈ ಹಣ ಬರುವುದು ಅನುಮಾನವಾಗಿದೆ. ಇನ್ನು ರಾಜ್ಯಕ್ಕೆ ಪ್ರಮುಖ ಯೋಜನೆಗಳನ್ನು ಘೋಷಿಸಿಲ್ಲ, ಆದಕಾರಣ ಇದೊಂದು ನಿರಾಶಾದಾಯಕ ಬಜೆಟ್‌ ಆಗಿದೆ ಎಂದು ಟೀಕಿಸಿದ್ದಾರೆ.

ಮಧ್ಯಮ ವರ್ಗದ ಆದಾಯ ತೆರಿಗೆದಾರರಿಗೆ ತೆರಿಗೆ ವಿನಾಯಿತಿ ದಾರಿ ಸರಳವಾಗಿಲ್ಲ. ಒಟ್ಟಾರೆ
ಬಜೆಟ್‌ ನಲ್ಲಿ ಕರ್ನಾಟಕ ರಾಜ್ಯವನ್ನು ಕಡೆಗಣಿಸಲಾಗಿದೆ. ನೀರಾವರಿ, ಮೆಟ್ರೋ, ರೈಲ್ವೆ ಯೋಜನೆಗಳಿಗೆ ಹೆಚ್ಚಿನ ಅನುದಾನದ ನಿರೀಕ್ಷೆಯೂ ಹುಸಿಯಾಗಿದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ