Breaking News

ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

Spread the love

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಇಂದು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.

 

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಕೃಷ್ಣ ಭೈರೇಗೌಡ ಸೇರಿ ‌ಇನ್ನಿತರ ಮುಖಂಡರು ಇದ್ದರು.

 

ಅನಾರೋಗ್ಯದಿಂದ ಚೇತರಿಸಿಕೊಂಡ ಸಿದ್ದರಾಮಯ್ಯ:

 

ಕಳೆದ ವಾರ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ವಾರದ ನಂತರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದರಿಂದ ಸೋಮವಾರ (ಜೂ.7) ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.

 

ಈ ಹಿನ್ನೆಲೆಯಲ್ಲಿ ಸತೀಶ ಜಾರಕಿಹೊಳಿ ಅವರು ಇಂದು ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದರು.‌


Spread the love

About Laxminews 24x7

Check Also

ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು

Spread the love ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್​ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ