Breaking News

ಗೋಕಾಕ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶಾಸಕ ಸತೀಶ್ ಜಾರಕಿಹೊಳಿ ಭೇಟಿ

Spread the love

ಗೋಕಾಕ : ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ  ಸುಧಾರಣ ಸಮಿತಿ ಅಧ್ಯಕ್ಷ, ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಮಂಗಳವಾರ ಭೇಟಿ ನೀಡಿ, ಪರಿಶೀಲಿಸಿದರು.

ಕಾಲೇಜು ಪ್ರಾಂಶುಪಾಲರು, ಸಿಬ್ಬಂದಿಯೊಂದಿಗೆ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಹಾಗೂ ಪ್ರವೇಶ ಪಡೆದಿರುವ ಕುರಿತು ಮಾಹಿತಿ ಪಡೆದರು. ಬಳಿಕ ನೂತನ ಕಟ್ಟಡದ ಗುಣಮಟ್ಟವನ್ನು ಪರಿಶೀಲನೆ ಮಾಡಿದರು.

ತದನಂತರ ಕಾಲೇಜು ಅಭಿವೃದ್ಧಿಗೆ ಮಾಡಬೇಕಾದ ಯೋಜನೆಗಳ ಕುರಿತು ಪ್ರಾಂಶುಪಾಲರೊಂದಿಗೆ ಚರ್ಚಿಸಿ, ಹಲವು ಸಲಹೆಗಳನ್ನು ನೀಡಿದರು. ಇದೇ ವೇಳೆ ಕಾಲೇಜ್ ಸಿಬ್ಬಂದಿ ಶಾಸಕರನ್ನು ಸತ್ಕರಿಸಿದರು.

ಈ ಸಂದರ್ಭದಲ್ಲಿ ಐ.ವಿ.ಕೌತನಾಳ, ಶ್ರೀಕಾಂತ ಕಲಾಲ, ಎ.ವೈ. ಹಾದಿಮನಿ, ಕಾಲೇಜು ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಅಂಗನವಾಡಿ ಕೇಂದ್ರಗಳಲ್ಲಿ ಕಳಪೆ ಆಹಾರ ಪೂರೈಕೆ ಆಗಿಲ್ಲ

Spread the loveಬೆಳಗಾವಿ: ಅಂಗನವಾಡಿ ಕೇಂದ್ರದ ಮಕ್ಕಳಿಗೆ ಕಳಪೆ ಆಹಾರ ಪೂರೈಕೆ ಆಗಿಲ್ಲ, ಅವಧಿ ಮುಗಿದ ಆಹಾರವನ್ನು ಪೂರೈಕೆ ಮಾಡಿಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ