Breaking News

ಸತೀಶ್ ಜಾರಕಿಹೊಳಿಗೆ ಸಿಎಂ ಆಗುವ ಅರ್ಹತೆ ಇದೆ: ಸಚಿವ ಎಂ.ಬಿ.ಪಾಟೀಲ್

Spread the love

ಬೆಂಗಳೂರು: ಸಿಎಂ ಆಗುವ ಎಲ್ಲ ಅರ್ಹತೆ ಸತೀಶ್ ಜಾರಕಿಹೊಳಿ ಅವರಿಗಿದೆ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು.‌
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರಮುಖ ನಾಯಕರು. ಡಿಕೆಶಿ, ಎಂ‌.ಬಿ.ಪಾಟೀಲ್, ಸತೀಶ್ ಅಂತಿಮ ಅಲ್ಲ. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು.
ಜನರ ಅಭಿಪ್ರಾಯ ಬೇಕು. ಸ್ವಯಂಘೋಷಿತ ಮುಖ್ಯಮಂತ್ರಿ‌ ಆಗೋಕೆ‌ ಆಗಲ್ಲ. ಶಾಸಕರು ಬಯಸಬೇಕು. ಆ ಮೇಲೆ‌ ಜನರು ಹೇಳಬೇಕು. ನಂತರ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಸಿಎಂ ಕುರ್ಚಿಗೆ ಸಾಕಷ್ಟು ಜನ ಅರ್ಹರಿದ್ದಾರೆ. ಡಿ.ಕೆ.ಶಿವಕುಮಾರ್, ಜಿ.ಪರಮೇಶ್ವರ್, ರಾಮಲಿಂಗಾರೆಡ್ಡಿ, ಕೃಷ್ಣ ಬೈರೇಗೌಡ, ಸತೀಶ್ ಜಾರಕಿಹೊಳಿ ಸೇರಿ ಹಲವರು ಸಮರ್ಥರಿದ್ದಾರೆ. ಆದರೆ ಹೈಕಮಾಂಡ್ ತೀರ್ಮಾನ ಮಾಡಬೇಕು ಎಂದು ತಿಳಿಸಿದರು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ