Breaking News

ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಹಳ್ಳಿಗಳಲ್ಲಿ ಸಮಸ್ಯೆ: ಅಧಿಕಾರಿಗಳೊಂದಿಗೆ ಶಾಸಕ ಸತೀಶ ಜಾರಕಿಹೊಳಿ ಸಭೆ

Spread the love

ಬೆಳಗಾವಿ ಜಿಲ್ಲೆ ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಹಳ್ಳಿಗಳಲ್ಲಿ ಕುಡಿಯುವ ನೀರು, ವಿದ್ಯುಚ್ಚಕ್ತಿ ಪೂರೈಕೆ, ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಆಗಿರುವ ಸಮಸ್ಯೆಗಳ ಕುರಿತು ಚರ್ಚಿಸಲು ತಾಲೂಕು ಪಂಚಾಯಿತಿಯಲ್ಲಿ ಶಾಸಕ ಸತೀಶ ಜಾರಕಿಹೊಳಿ ಅಧಿಕಾರಿಗಳ ಸಭೆ ನಡೆಸಿ, ಸಲಹೆ ಸೂಚನೆ ನೀಡಿದರು.

ಯಮಕನಮರಡಿ ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರು, ವಿದ್ಯುಚ್ಚಕ್ತಿ ಪೂರೈಕೆ, ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಆಗಿರುವ ಸಮಸ್ಯೆಗಳ ಕುರಿತು ಗ್ರಾಮಗಳ ಜನರು ದೂರು ಸಲ್ಲಿಸಿರುವ ಹಿನ್ನೆಲೆಯಲ್ಲಿ ಈ ಕುರಿತು ಚರ್ಚಿಸಲು ತಾಲೂಕು ಪಂಚಾಯಿತಿಯಲ್ಲಿ ಶಾಸಕ ಸತೀಶ ಜಾರಕಿಹೊಳಿ ಅಧಿಕಾರಿಗಳ ಸಭೆ ನಡೆಸಿದರು. ವಿವಿಧ ವಿಭಾಗಗಳ ಅಧಿಕಾರಿಗಳು ಮತ್ತು ಪಿಡಿಒಗಳ ನಡುವೆ ಸಮನ್ವಯವಿಲ್ಲ. ಇದರಿಂದ ಯೋಜನೆಗಳ ಅನುಷ್ಠಾನ ಸರಿಯಾಗಿ ಆಗುತ್ತಿಲ್ಲ. ಅನೇಕ ಹಳ್ಳಿಗಳಲ್ಲಿ ಕುಡಿಯುವ ನೀರು, ವಿದ್ಯುಚ್ಛಕ್ತಿ ಪೂರೈಕೆ ಸಮಸ್ಯೆಗಳಿವೆ. ಅನೇಕ ಫಲಾನುಭವಿಗಳಿಗೆ ಮನೆಗಳು ಮಂಜೂರಾಗಿದ್ದರೂ ಹಂಚಿಕೆಯಾಗುತ್ತಿಲ್ಲ ಎಂದು ಗ್ರಾಮ ಪಂಚಾಯಿತಿ ಸದಸ್ಯರ ದೂರುಗಳನ್ನು ಶಾಸಕ ಸತೀಶ ಜಾರಕಿಹೊಳಿ ಅಧಿಕಾರಿಗಳ ಗಮನಕ್ಕೆ ತಂದರು.

ನಂತರ ವಿವಿಧ ಯೋಜನೆಗಳ ಅನುಷ್ಠಾನ, ಜನಪರ ಯೋಜನೆಗಳ ಪ್ರಗತಿಯ ಬಗ್ಗೆ ಮಾಹಿತಿ ಪಡೆದ ಶಾಸಕ ಸತೀಶ ಜಾರಕಿಹೊಳಿ, ಜನರಿಗೆ ತೊಂದರೆ ನೀಡದೇ ಎಲ್ಲ ಕೆಲಸಗಳನ್ನು ಸಕಾಲದಲ್ಲಿ ಪೂರೈಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಹಸೀಲ್ದಾರ್ ಆರ್.ಕೆ.ಕುಲಕರ್ಣಿ, ಉಪವಿಭಾಗಾಧಿಕಾರಿ ಕರಲಿಂಗಣ್ಣವರ, ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಸನದಿ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಅರುಣ ಕಟಾಂಬಳೆ, ಸಿದ್ದು ಸುಣಗಾರ ಮತ್ತಿತರರು ಇದ್ದರು.


Spread the love

About Laxminews 24x7

Check Also

ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ

Spread the love ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ಉದ್ಘಾಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ