ಗೋಕಾಕ: ಗೃಹಸಚಿವರು ಅತ್ಯಾಚಾರ ಪ್ರಕರಣದ ಬಗ್ಗೆ ಬೇಜವಾಬ್ದಾರಿಯಾಗಿ ಹೇಳಿಕೆ ನೀಡಿದ್ದಾರೆ. ಇದು ಸರಿಯಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಸಚಿವರ ಬಾಯಿಂದ ಈ ರೀತಿಯ ಮಾತು ಬರಬಾರದಿತ್ತು. ಅವರ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಜನರೇ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಗೃಹ ಸಚಿವರು ಅವರ ಸಾಮರ್ಥ್ಯದ ಬಗ್ಗೆ ಅವರೇ ಸವಾಲು ಎತ್ತಿದ್ದಾರೆ ಎಂದರು.
ಅತ್ಯಾಚಾರ ಪ್ರಕರಣದಿಂದ ಮೈಸೂರು ಭಾಗದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಪ್ರಕರಣದ ಬಗ್ಗೆ ಪೊಲೀಸರು ಆದಷ್ಟು ಬೇಗ ತನಿಖೆ ಮಾಡಬೇಕು. ಸಂತ್ರಸ್ತೆಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು.
ಪಾಲಿಕೆ ಚುನಾವಣೆಯಲ್ಲಿ ಎಲ್ಲ ಸಮುದಾಯಗಳಿಗೂ ಟಿಕೆಟ್ ಕೊಟ್ಟಿದ್ದೇವೆ:
ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಎಲ್ಲ ಸಮುದಾಯದ ಅಭ್ಯರ್ಥಿಗಳಿಗೂ ಟಿಕೆಟ್ ನೀಡಿದ್ದೇವೆ. ಪಕ್ಷ ಹಾಗೂ ಸ್ಥಳೀಯ ಮುಖಂಡರೊಂದಿಗೆ ಚರ್ಚಿಸಿದ್ದೇವೆ. ಆಯಾ ವಾರ್ಡ್ ನಲ್ಲಿ ಹೆಚ್ಚು ವೋಟ್ ಇರುವ ಸಮುದಾಯ ಅಭ್ಯರ್ಥಿಗಳಿಗೆ ಟಿಕೆಟ್ ಕೊಟ್ಟಿದ್ದೇವೆ. ಬೇರೆ ಪಕ್ಷದವರ ಬಗ್ಗೆ ನಾವು ಮಾತನಾಡುವುದಿಲ್ಲ ಎಂದು ಪತ್ರಕರ್ತರ ಪ್ರಶ್ನೆಗೆ ಸತೀಶ ಪ್ರತಿಕ್ರಿಯಿಸಿದರು.
Laxmi News 24×7