ಅಥಣಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾರ್ವಜನಿಕರ ಸಮಸ್ಯೆಗೆ ಸ್ಪಂದನೆ ನೀಡಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆರೋಪಿಸಿದರು.
ಅಥಣಿ ಪಟ್ಟಣದಲ್ಲಿ ಪುರಸಭೆ ಚುನಾವಣಾ ನಿಮಿತ್ತ ಹಮ್ಮಿಕೊಂಡಿದ್ದ ಪ್ರಚಾರ ಸಭೆ ಉದ್ದೇಶಿಸಿ ಅವರು ಮಾತನಾಡಿದರು.
ಡಿ. 27ರಂದು ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ, ಕಾಂಗ್ರೆಸ್ ಪಕ್ಷದ ಶಕ್ತಿ ಬಲಪಡಿಸಬೇಕು ಎಂದರು.
ಕಾಂಗ್ರೆಸ್ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಮಾತ್ರ ಹೆಚ್ಚಿನ ಅಭ್ಯರ್ಥಿಗಳು ಆಯ್ಕೆಯಾಗಲು ಸಾಧ್ಯ ಎಂದು ಕರೆ ನೀಡಿದರು.
ಕೆಲವು ರಾಜಕೀಯ ಸನ್ನಿವೇಶ ದಲ್ಲಿ ಮಹೇಶ ಕುಮಟಳ್ಳಿ ಬಿಜೆಪಿ ಸೇರಿದರು. ಆದರೆ ಮುಂದಿನ ದಿನದಲ್ಲಿ ಹಾಗೆ ಆಗಬಾರದು ಎಂದರು.
ಈ ಸಂದರ್ಭದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ, ಮಾಜಿ ಸಚಿವರಾದ ಎ.ಬಿ. ಪಾಟೀಲ, ವೀರಕುಮಾರ ಪಾಟೀಲ್, ಮಾಜಿ ಶಾಸಕರಾದ ರಾಜು ಕಾಗೆ, ಮೋಹನ ಶಾ, ಕಾಕಾಸಾಹೇಬ್ ಪಾಟೀಲ್, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ದಿಗ್ಗವಿಜಯ ಪವಾರ್ ದೇಸಾಯಿ, ಚಂದ್ರಕಾಂತ ಇಮ್ಮಡಿ, ವಿಜಯ ಅಕ್ಕಿವಾಟ್, ರಮೇಶ ಸಿಂದಗಿ, ಗಜಾನನ ಮಂಗಸೂಳಿ, ಸದಾಶಿವ ಬುಟಾಳಿ, ಮಾಜಿ ಶಾಸಕ ಶಹಜಾನ್ ಡೊಂಗರಗಾವ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಇದ್ದರು.