ಗೋಕಾಕ: ಕಳೆದ ಆರು ತಿಂಗಳಿಂದ ಪ್ರತಿ ಭಾನುವಾರ ನಗರದಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ಮೂಲಕ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಕಾಕ ನಗರದ ಬಸ್ ನಿಲ್ದಾಣ ಸೇರಿದಂತೆ ಇತರೆ ಸ್ಥಳದಲ್ಲಿಯೂ ಸತೀಶ್ ಜಾರಕಿಹೊಳಿ ಫೌಂಡೇಶನ್ ಸದಸ್ಯರು ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ. ಅದನ್ನು ವೀಕ್ಷಿಸಲಾಯಿತು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ನಗರದ ತರಕಾರಿ ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರ ಸಮಸ್ಯೆ ಆಲಿಸಿ, ಅವುಗಳನ್ನುಸರಿಪಡಿಸಲು ನಗರಸಭೆ ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದು ತಿಳಿಸಿದರು.
Laxmi News 24×7