Breaking News

ಕನ್ನಡಿಗರನ್ನು ರಾಜ್ಯಕ್ಕೆ ಕರೆ ತರಲು ಸಿಎಂಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಮನವಿ

Spread the love

ಕನ್ನಡಿಗರನ್ನು ರಾಜ್ಯಕ್ಕೆ ಕರೆ ತರಲು ಸಿಎಂಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಮನವಿ

ಉಕ್ರೇನ್‌-ರಷ್ಯಾ ನಡುವೆ ಯುದ್ಧ ಆರಂಭ

ಬೆಳಗಾವಿ: ಉಕ್ರೇನ್‌-ರಷ್ಯಾ ನಡುವೆ ಯುದ್ಧ ಆರಂಭವಾಗಿದ್ದು, ಹಲವು ಸಾವು, ನೋವುಗಳು ಆಗುತ್ತಿವೆ. ಸಾಕಷ್ಟು ಜನ ಕನ್ನಡಿಗರು ಸೇರಿದಂತೆ ವಿದ್ಯಾರ್ಥಿಗಳು ಉಕ್ರೇನ್‌ ನಲ್ಲಿ ಸಿಲುಕಿದ್ದು, ಅವರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆ ತರಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಮನವಿ ಮಾಡಿದ್ದಾರೆ.

ಈ ಕುರಿತು ಟೀಟ್‌ ಮೂಲಕ ಮನವಿ ಮಾಡಿದ ಅವರು, ಹಲವು ಕನ್ನಡಿಗರು ಸೇರಿದಂತೆ ವಿದ್ಯಾರ್ಥಿಗಳು ಉಕ್ರೇನ್‌ ನಲ್ಲಿ ಇದ್ದಾರೆ. ಬೆಳಗಾವಿ ಜಿಲ್ಲೆಯ ವಿದ್ಯಾರ್ಥಿಗಳು ಇದ್ದಾರೆ. ಕಾರಣ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅವರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆ ತರುವ ವ್ಯವಸ್ಥೆ ಮಾಡಬೇಕೆಂದು ಟೀಟ್‌ನಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Spread the loveಬೆಂಗಳೂರು:  ಸುರಿದ ಭಾರೀ ಮಳೆಗೆ ನಡೆದ ಅವಾಂತರಗಳು ಒಂದಾ.. ಎರಡಾ..? ಬೇಸಿಗೆ ಮಳೆಗೆ ಇಡೀ ಸಿಲಿಕಾನ್ ಸಿಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ