Breaking News

1 ಕೋಟಿ 40 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಚಾಲನೆ

Spread the love

 

 

ಯಮಕನಮರಡಿ: ಕ್ಷೇತ್ರದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ರಾಜಿ ಮಾಡಿಕೊಳ್ಳದೇ ಗುಣಮಟ್ಟ ಕಾಯ್ದುಕೊಳ್ಳಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.

ಹೆಬ್ಬಾಳ ಜಿಲ್ಲಾ ಪಂಚಾಯತ್‌ ವ್ಯಾಪ್ತಿಯ ಉಳ್ಳಾಗಡಿ ಖಾನಾಪುರದಿಂದ ರಾಷ್ಟ್ರೀಯ ಹೆದ್ದಾರಿ NH 4 ವರೆಗಿನ 1 ಲೋಕೋಪಯೋಗಿ ಇಲಾಖೆ ವತಿಯಿಂದ ಮಂಜೂರಾದ 1 ಕೋಟಿ 40 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

 

ಇದೇ ವೇಳೆ ಕ್ಷೇತ್ರದಲ್ಲಿ ವಿವಿಧ ಇಲಾಖೆಗಳ ವತಿಯಿಂದ ನಡೆಯುತ್ತಿರುವ ಪಟ್ಟಣ ಮತ್ತು ಗ್ರಾಮೀಣ ಭಾಗದ ರಸ್ತೆ ಕಾಮಗಾರಿಗಳನ್ನು ಗುಣಮಟ್ಟದಿಂದ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

 

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಜ್ಶೋತಿ ಕುಂಬಾರ, ಗ್ರಾಪಂ ಸದಸ್ಯರಾದ ಸಿ.ಡಿ. ಪಾಟೀಲ್‌, ಮಹಾರುದ್ರ ಜರಳಿ, ಸುದೀರ ಗಿರಿಗೌಡರ, ಪರಸುರಾಮ ದಂಡಗಿದಾಸ, ಪೂಜಾ ಪರಸುರಾಮ ತಳವಾರ, ಸುನೀತಾ ಹೆಬ್ಬಾಳಿ, ಪವಿತ್ರ ಬಡಿಗೇರ, ಕಲ್ಪನಾ ವೀರಭದ್ರನ್ನವರ, ಸುನೀತಾ ದಾಸನಟ್ಟಿ, ರುಬಾಬಿ ಹಜತಬಾಯ್, ಕಾಂಗ್ರೆಸ್‌ ಮುಖಂಡರಾದ ಶ್ರೀ ರಾಜು ಅವಟೆ, ಪಾರೇಶೌಡ ಪಾಟೀಲ್, ಪರಸುರಾಮ ತಳವಾರ‌, ಬಸವರಾಜ ಗಿರಿಮಲ್ಲನ್ನವರ, ಸಚೀನ ಹೆಬ್ಬಾಳಿ, ರವೀಂದ್ರ ವೀರಭದ್ರನ್ನವರ, ಹನಮಂತ ನಾಯಿಕ, ಅಜ್ಜಪ ಹೆಬ್ಬಾಳಿ, ಬಸೀರ ಲಾಡಖಾನ ಹಾಗೂ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು, ಗ್ರಾಮದ ಹಿರಿಯರು ಇದ್ದರು.


Spread the love

About Laxminews 24x7

Check Also

ಉಗಾರದ ಪದ್ಮಾವತಿ ಮಂದಿರ ಸಮುದಾಯ ಭವನ ಹಾಗೂ ಮುಂಭಾಗದಲ್ಲಿ ಆರ್‌ಸಿಸಿ ಕಾಮಗಾರಿಗಾಗಿ 65 ಲಕ್ಷ ರೂಪಾಯ್ ಕಾಮಗಾರಿಗೆ ಶಾಸಕ ರಾಜು ಕಾಗೆ ಪೂಜೆ ನೆರವೇರಿಸಿದರು.

Spread the love ಉಗಾರದ ಪದ್ಮಾವತಿ ಮಂದಿರ ಸಮುದಾಯ ಭವನ ಹಾಗೂ ಮುಂಭಾಗದಲ್ಲಿ ಆರ್‌ಸಿಸಿ ಕಾಮಗಾರಿಗಾಗಿ 65 ಲಕ್ಷ ರೂಪಾಯ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ