Breaking News

ಗ್ರಾಪಂಗೆ ಆಯ್ಕೆಯಾದ ನೂತನ ಸದಸ್ಯರಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ಸನ್ಮಾನ

Spread the love

ಬಾಗಲಕೋಟೆ : ಜಿಲ್ಲೆಯ ಬಿಳಗಿ ಮತಕ್ಷೇತ್ರದ ಅರಕೇರಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 15ರ ಪೈಕಿ 13 ಸ್ಥಾನಗಳ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ನೂತನ ಗ್ರಾಪಂ ಸದಸ್ಯರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಮಂಗಳವಾರ ಸನ್ಮಾನಿಸಿದರು.

 

ಮುದಕಪ್ಪ ಮಲ್ಲಾರ, ಸದಪ್ಪ ಆಗೋಜಿ, ಲಕ್ಷ್ಮಣ ದನಾಕಾರ, ಯಲ್ಲಪ್ಪ ಶಿಡ್ಲೆನ್ನವರ, ಸುಭಾಷ ಗಸ್ತಿ, ಲಕ್ಷ್ಮಣ ಮಾಲಗಿ, ಸಿಂಧೂರ ಆನೆಗುಂದಿ ನೂತನ ಸದಸ್ಯರು ಸನ್ಮಾನ ಮಾಡಿದರು.

 

ಗ್ರಾಮ ಪಂಚಾಯಿತಿಗೆ ನೂತನವಾಗಿ ಆಯ್ಕೆಯಾಗಿರುವ ಸದಸ್ಯರು ಉತ್ತಮ ಕೆಲಸ ಮಾಡಿ. ಗ್ರಾಮದಲ್ಲಿನ ಸಮಸ್ಯೆಗಳನ್ನು ಅರಿತು ಜನರ ಧ್ವನಿಯಾಗಿ, ಗ್ರಾಮದ ಅಭಿವೃದ್ಧಿ ಉದ್ದೇಶವಿಟ್ಟುಕೊಂಡು ಕೆಲಸ ಮಾಡಬೇಕು. ಇದರಿಂದ ಪಕ್ಷಕ್ಕೂ, ತಮ್ಮ ಮುಂದಿನ ರಾಜಕೀಯ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಸಲಹೆ ನೀಡಿದರು.

 

ಈ ಸಂದರ್ಭ ರವಿ ಮೇತ್ರಿ, ಹಣಮಂತ ಕಂಬಳಿ, ಹಣಮಂತ ನಡಿಗೇರಿ ಸೇರಿದಂತೆ ಇತರರು ಇದ್ದರು.


Spread the love

About Laxminews 24x7

Check Also

ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಂಚಿನಾಳ–ಹಳೇಗುಡಗನಟ್ಟಿ–ಯಮಕನಮರಡಿ ರಸ್ತೆಯ ಅಗಲೀಕರಣ, ಡಾಂಬರೀಕರಣ,

Spread the loveಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಂಚಿನಾಳ–ಹಳೇಗುಡಗನಟ್ಟಿ–ಯಮಕನಮರಡಿ ರಸ್ತೆಯ ಅಗಲೀಕರಣ, ಡಾಂಬರೀಕರಣ, ಪಾದಚಾರಿ ಮಾರ್ಗ (ಫುಟ್ ಪಾತ್) ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ