ಗೋಕಾಕ: “ರೈತರ ಪ್ರತಿಭಟನೆಯ ಕುರಿತು ಸಚಿವರು ಹಾದಿ-ಬೀದಿಯಲ್ಲಿ ಹೋಗುವವರ ರೀತಿ ಮಾತನಾಡಬಾರದು. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಜವಾಬ್ದಾರಿಯುತ ಹೇಳಿಕೆ ನೀಡಬೇಕು” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿಕೆಗೆ ಟಾಂಗ್ ನೀಡಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬರು ಹಕ್ಕು. ಆದರೆ, ಹಿಂಸಾತ್ಮಕ ಹೋರಾಟ ನಡೆಸುವುದು ತಪ್ಪು. ರೈತರ ಪ್ರತಿಭಟನೆ ಪಕ್ಷಾತೀತವಾಗಿದ್ದು, ಈ ಬಗ್ಗೆ ಯಾರೂ ಕೂಡ ಹಗುರವಾಗಿ ಮಾತನಾಡಬಾರದರು” ಎಂದರು.
“ರೈತರು ಕೆಂಪುಕೋಟೆಯ ಮೇಲೆ ರೈತ ಸಂಘಟನೆಗಳ ಧ್ವಜ್ ಹಾರಿಸಿದ್ದಾರೆ ಹೊರತು, ಅಲ್ಲಿ ಇದ್ದ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿಲ್ಲ. ಹೀಗಾಗಿ, ರೈತರು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ ಎಂಬ ಪ್ರಶ್ನೆಯೇ ಬರುವುದಿಲ್ಲ” ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
Laxmi News 24×7