Breaking News

ಘಟಪ್ರಭಾ ಕೆನಾಲ್‌ಗೆ ಸೇತುವೆ ನೆಲಸಮ ಸತೀಶ ಜಾತಕಿಹೋಳಿ ಪರಿಶೀಲನೆ

Spread the love

 

ಸಂಕೇಶ್ವರ–ಯರಗಟ್ಟಿ ರಾಜ್ಯ ಹೆದ್ದಾರಿಯ ಘಟಪ್ರಭಾ ಪಟ್ಟಣದ ಸಮೀಪ, ಘಟಪ್ರಭಾ ಕೆನಾಲ್‌ಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಹಳೆಯ ಸೇತುವೆ ಗಂಭೀರ ಬಿರುಕು ಬಿಟ್ಟು ಸಂಚಾರಕ್ಕೆ ಯೋಗ್ಯವಲ್ಲದ ಸ್ಥಿತಿಗೆ ತಲುಪಿರುವುದರಿಂದ ಅದನ್ನು ನೆಲಸಮ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಸಚಿವ ಸತೀಶ ಜಾರಕಿಹೋಳಿ ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿಯನ್ನು ಪರಿಶೀಲಿಸಿದರು.

ಸಾರ್ವಜನಿಕರ ಸುರಕ್ಷತೆಯನ್ನು ಪ್ರಥಮ ಆದ್ಯತೆಯಾಗಿ ಪರಿಗಣಿಸಿ, ಅಂದಾಜು ರೂ. 5.00 ಕೋಟಿ ವೆಚ್ಚದಲ್ಲಿ ನೂತನ ಸೇತುವೆ ನಿರ್ಮಾಣ ಕಾರ್ಯವನ್ನು 45 ದಿನಗಳೊಳಗೆ ಪೂರ್ಣಗೊಳಿಸುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಯಿತು.

ಇದೇ ವೇಳೆ, ದಿನನಿತ್ಯದ ವಾಹನ ಸಂಚಾರಕ್ಕೆ ಯಾವುದೇ ಅಡೆತಡೆ ಉಂಟಾಗದಂತೆ ತಾತ್ಕಾಲಿಕ ಸೇತುವೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಅದನ್ನೂ ಒಂದು ವಾರದೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.


Spread the love

About Laxminews 24x7

Check Also

ಸಾವಳಗಿಯಲ್ಲಿ ಶ್ರೀ ಶಿವಲಿಂಗೇಶ್ವರ ಜಾತ್ರಾ ಮಹೋತ್ಸವ ಅದ್ದೂರಿ – ಅಡ್ಡ ಪಲ್ಲಕ್ಕಿ ಉತ್ಸವಕ್ಕೆ ಭಕ್ತರ ಅಪಾರ ಸ್ಪಂದನೆ

Spread the loveಗೋಕಾಕ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಶ್ರೀ ಶಿವಲಿಂಗೇಶ್ವರ ಜಾತ್ರಾ ಮಹೋತ್ಸವ ಹಾಗೂ ಅಡ್ಡ ಪಲ್ಲಕ್ಕಿ ಉತ್ಸವದಲ್ಲಿ ಶೂನ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ