Breaking News

ಅಕ್ರಮ ಹಣ ವರ್ಗಾವಣೆ ಕೇಸ್‌; ಶಾಸಕ ಸತೀಶ್‌ ಸೈಲ್‌ಗೆ ವೈದ್ಯಕೀಯ ಜಾಮೀನು ಮಂಜೂರು

Spread the love

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಸಂಬಂಧ ಜಾರಿ‌ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ಹೈಕೋರ್ಟ್‌ ವೈದ್ಯಕೀಯ ಜಾಮೀನು ಮಂಜೂರು ಮಾಡಿದೆ.

ಲಿವರ್ ಕಸಿ ಮಾಡಿಸಬೇಕಿರುವುದರಿಂದ ಜಾಮಿನು ನೀಡಲಾಗುತ್ತಿದೆ ಎಂದು ಹೈಕೋರ್ಟ್‌ ತಿಳಿಸಿದೆ. ಲಿವರ್ ಕಸಿ ಕುರಿತು 2 ವಾರಕ್ಕೊಮ್ಮೆ ವರದಿ ಸಲ್ಲಿಸಬೇಕು. ಎಂಟು ವಾರಗಳಿಗೊಮ್ಮೆ ಆರೋಗ್ಯದ ಸ್ಥಿತಿಗತಿ ಬಗ್ಗೆ ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು‌ ಕೋರ್ಟ್‌ ನಿರ್ದೇಶನ ನೀಡಿದೆ. ಪ್ರಾಸಿಕ್ಯೂಷನ್ ಸಾಕ್ಷ್ಯದ ಮೇಲೆ ಪ್ರಭಾವ ಬೀರಬಾರದು. ವಿಚಾರಣಾ ನ್ಯಾಯಾಲಯ ವಿಚಾರಣೆಗೆ ತೊಂದರೆ ಉಂಟು ಮಾಡಬಾರದು. ಐದು ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಒಂದು ಭದ್ರತಾ ಖಾತರಿ ಒದಗಿಸಬೇಕು ಎಂದು ಹೈಕೋರ್ಟ್‌ ಷರತ್ತು ವಿಧಿಸಿದೆ.


Spread the love

About Laxminews 24x7

Check Also

ನೈಟ್‌ ಔಟ್‌ ವೇಳೆ ಬೈಕ್‌ಗೆ ಲಾರಿ ಡಿಕ್ಕಿ – ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು

Spread the loveನೆಲಮಂಗಲ: ಬಿರಿಯಾನಿ ತಿನ್ನಲು ಹೋಗ್ತಿದ್ದಾಗ ಬೈಕ್‌ಗೆ ಲಾರಿ ಡಿಕ್ಕಿಯಾಗಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನಪ್ಪಿರುವ ಘಟನೆ ನೆಲಮಂಗಲ-ಹಾಸನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ