ಬೆಳಗಾವಿ: ಸತೀಶ ಜಾರಕಿಹೊಳಿ ಅಭಿಮಾನಿ ಬಳಗ, ವಾಲ್ಮೀಕಿ ಯುವ ವೇದಿಕೆ ಕಾರ್ಯಕರ್ತರು ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕೀಡಾದ ಬಡ ಜನರಿಗೆ, ಕೂಲಿ ಕಾರ್ಮಿಕರಿಗೆ, ಆಹಾರ ಧಾನ್ಯ ಸೇರಿ ಅಗತ್ಯ ವಸ್ತುಗಳನ್ನು ವಿತರಿಸಿದರು.
ವಾಲ್ಮೀಕಿ ಯುವ ವೇದಿಕೆ ರಾಜ್ಯಾಧ್ಯಕ್ಷ ವಿಜಯ ತಳವಾರ ನೇತೃತ್ವದಲ್ಲಿ ಕಾರ್ಯಕರ್ತರು, ಮಾಹಾನಗರ ಪಾಲಿಕೆ ಮೂಲಕ ಬಡವರಿಗೆ ಮತ್ತು ಅಗತ್ಯ ಸೇವೆ ಸಲ್ಲಿಸುತ್ತಿರುವ ಪೊಲೀಸ್, ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಊಟ, ಹಣ್ಣು ಹಂಪಲ, ಹ್ಯಾಂಡ್ ವಾಷ್, ವಾಟರ್ ಬಾಟಲ್ ಗಳನ್ನು ವಿತರಿಸಿದರು.
ಬಳಿಕ ಜ್ಯೋತಿ ನಗರ ಕೊಳಗೇರಿ, ಗಣೇಶಪುರ ನಗರದಲ್ಲಿನ ಕಾರ್ಮಿಕರಿಗೆ ಊಟದ ವ್ಯವಸ್ಥೆ ಕಲ್ಪಿಸಿದರು.


Laxmi News 24×7