Breaking News

: ಕೊರೊನಾ ಸೋಂಕು ಹರಡದಂತೆ ಎಲ್ಲರೂ ಒಟ್ಟಾಗಿ ಹೋರಾಡಬೇಕು: ಶಾಸಕ ಸತೀಶ್ ಜಾರಕಿಹೊಳಿ

Spread the love

ಮೂಡಲಗಿ: ಕೊರೊನಾ ಸೋಂಕು ಹರಡದಂತೆ ಎಲ್ಲರೂ ಒಟ್ಟಾಗಿ ಹೋರಾಡಬೇಕು. ಜನರು ಅನಗತ್ಯವಾಗಿ ಮನೆಯಿಂದ ಹೊರಗೆ ಬರುವುದು, ಅಂತರ ಕಾಯ್ದುಕೊಳ್ಳುವುದರಿಂದ ಮಾತ್ರ ಕೊರೊನಾ ತಡೆಗಟ್ಟಲು ಸಾಧ್ಯವಾಗಲಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಮೂಡಲಗಿಯಲ್ಲಿ ಬುಧವಾರ ತಾಲ್ಲೂಕು ಅಧಿಕಾರಿಗಳೊಂದಿಗೆ ಕೊರೊನಾ ನಿಯಂತ್ರಣ ಬಗ್ಗೆ ಚರ್ಚಿಸಿದ ಬಳಿಕ ಮಾತನಾಡಿದರು. ಮೂಡಲಗಿ ತಾಲ್ಲೂಕಿನಲ್ಲಿ ಕೊರೊನಾ ನಿಯಂತ್ರಣ ಮಾಡುವಲ್ಲಿ ಆಶಾ ಕಾರ್ಯಕರ್ತರ ಕಾರ್ಯವು ಹೆಮ್ಮೆ ವಿಷಯವಾಗಿದೆ. ಲಾಕ್‌ಡೌನ್ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಯುವುದು, ಪಡಿತರ ವಿತರಣೆ, ಜನರ ಆರೋಗ್ಯ ಪರೀಕ್ಷೆ ಮತ್ತು ಕ್ವಾರಂಟೈನ್ ವ್ಯವಸ್ಥೆ ಮಾಡುವುದರಲ್ಲಿ ತಾಲ್ಲೂಕು ಆಡಳಿತದ ಕಾರ್ಯವು ಶ್ಲಾಘನೀಯವಾಗಿದೆ ಎಂದರು.

ಕೊರೊನಾ ಹೋರಾಟದಲ್ಲಿ ಮಾಧ್ಯಮದವರ ಕೆಲಸವು ಪ್ರಮುಖವಾಗಿದೆ. ಸರ್ಕಾರವು ಅವರ ಸಹಾಯಕ್ಕೆ ಬರಬೇಕಾಗಿದೆ. ಮಾಧ್ಯಮದವರಿಗೂ ವಿಶೇಷ ಆರ್ಥಿಕ ಸಹಾಯ ದೊರಕುವಂತಾಗಬೇಕು ಎಂದು ಅಭಿಪ್ರಾಯಪಟ್ಟರು.
ತಹಶೀಲ್ದಾರ್ ಡಿ.ಜಿ. ಮಹಾತ್, ಸಿಪಿಐ ವೆಂಕಟೇಶ ಮುರನಾಳ, ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ್ ಮನ್ನಿಕೇರಿ, ಮುಖ್ಯಾಧಿಕಾರಿ ದೀಪಕ ಹರ್ದಿ, ವೈದ್ಯಾಧಿಕಾರಿ ಡಾ. ಭಾರತಿ ಕೋಣಿ, ಸಿಡಿಪಿಒ ವೈ.ಎಂ. ಗುಜನಟ್ಟಿ, ಪಿಎಸ್‌ಐ ಮಲ್ಲಿಕಾರ್ಜುನ ಸಿಂಧೂರ, ಎಚ್.ಎಲ್. ಬಾಲದಂಡಿ ಮತ್ತಿತರರು ಇದ್ದರು.


Spread the love

About Laxminews 24x7

Check Also

ಮಹಾಜನ ವರದಿಯೇ ಅಂತಿಮ ಎಂದು ನಿರ್ಣಯ ಕೈಗೊಳ್ಳಲು ಕನ್ನಡಪರ ಸಂಘಟನೆಗಳ ಒತ್ತಾಯ

Spread the loveಬೆಳಗಾವಿ: ಬೆಳಗಾವಿ ಕರ್ನಾಟಕ ಅವಿಭಾಜ್ಯ ಅಂಗ. ಮಹಾಜನ ವರದಿಯೇ ಅಂತಿಮ ಎಂದು ಐತಿಹಾಸಿಕ ನಿರ್ಣಯ ಕೈಗೊಳ್ಳಲು ಬೆಳಗಾವಿ ಮಹಾನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ