Breaking News

ಬೆಳಗಾವಿ: ಶಾಸಕ ಸತೀಶ ಜಾರಕಿಹೊಳಿಗೆ ಅಭಿನಂದನೆ ಸಲ್ಲಿಸಿದ ಹೆಬ್ಬಾಳ ನೂತನ ಜಿ.ಪಂ ಸದಸ್ಯ

Spread the love

ಬೆಳಗಾವಿ: ಶಾಸಕ ಸತೀಶ ಜಾರಕಿಹೊಳಿಗೆ ಅಭಿನಂದನೆ ಸಲ್ಲಿಸಿದ ಹೆಬ್ಬಾಳ ನೂತನ ಜಿ.ಪಂ ಸದಸ್ಯ

ಬೆಳಗಾವಿ: ಯಮಕನಮರಡಿ ಮತಕ್ಷೇತ್ರದ ಹೆಬ್ಬಾಳ ಜಿಲ್ಲಾ ಪಂಚಾಯಿತಿ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ ಕಾಂಗ್ರೆಸ್ ಅಭ್ಯರ್ಥಿ ಮಹಾಂತೇಶ ಮಗದುಮ್ ಶಾಸಕ ಸತೀಶ ಜಾರಕಿಹೊಳಿ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿ ಸನ್ಮಾನಿಸಿದರು.

ಇಲ್ಲಿನ ಶಾಸಕರ ಗೃಹ ಕಚೇರಿಗೆ ಕಾರ್ಯಕರ್ತರ ಜೊತೆ ಭೇಟಿ ನೀಡಿದ ಮಹಾಂತೇಶ ಮಗದುಮ್ ಶಾಸಕರಿಗೆ ಕೃತಜ್ಞೆಗಳನ್ನು ಸಲ್ಲಿಸಿದರು. ಹೆಬ್ಬಾಳ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಲು ಶಾಸಕ ಸತೀಶ ಜಾರಕಿಹೊಳಿ ಸೂಚಿಸಿದರು.

ಈ ಸಂದರ್ಭದಲ್ಲಿ ಪಪ್ಪುಗೌಡ ಪಾಟೀಲ, ಆನಂದ ತವಗಮಠ, ಇಲಿಯಾಸ್ ಇನಾಮದಾರ್, ಅಪ್ಪುಗೌಡ ಪಾಟೀಲ, ರಾವಸಾಬ ಗುಡಸಿ, ಶಿವನಗೌಡ ಪಾಟೀಲ, ಶಿವಾನಂದ ಬಾಗೇವಾಡಿ, ಶಂಕರ ಆಡಿಚ್ ಸೇರಿ ಇತರರು ಇದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ