ಬೆಳಗಾವಿ: ಜನರಿಗೆ ಅಗತ್ಯವಿರುವ ವಸ್ತುಗಳನ್ನು ಹೆಚ್ಚಿಗೆ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಪ್ರತಿ ಗ್ರಾಮಗಳಲ್ಲಿ ಪಾಗಿಂಗ್ ಹಾಗೂ ಬ್ಲಿಚಿಂಗ್ ಪೌಡರ್ ಸಿಂಪಡಿಸಬೇಕು ಎಂದು ಶಾಸಕರಾದ ಉಮೇಶ ಕತ್ತಿ ಹಾಗೂ ಸತೀಶ ಜಾರಕಿಹೊಳಿ ಅವರ ಜಂಟಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.
ಹುಕ್ಕೇರಿ ತಾಲ್ಲೂಕಾ ಪಂಚಾಯಿತಿ ಸಭಾಭವನದಲ್ಲಿ ಶನಿವಾರ ಕೊರೊನಾ ಕುರಿತು ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಜನರ ಆರೋಗ್ಯದ ದೃಷ್ಟಿಯಿಂದ ಹುಕ್ಕೇರಿ ಹಾಗೂ ಯಮಕನಮರಡಿ ಕ್ಷೇತ್ರದ ಪ್ರತಿ ಗ್ರಾಮಗಳಲ್ಲಿ ಪಾಗಿಂಗ್, ಬ್ಲಿಚಿಂಗ್ ಪೌಡರ್ ಸಿಂಪಡಿಸಬೇಕು. ಸಾರ್ವಜನಿಕರಿಗೆ ಕೊರೊನಾ ಜಾಗೃತಿ ಮೂಡಿಸುವುದರೊಂದಿಗೆ ಅವರ ಆರೋಗ್ಯ ರಕ್ಷಣೆ ಮಾಡುವುದು ನಮ್ಮಲ್ಲರೆ ಹೊಣೆಯಾಗಿದೆ. ಆದ ಕಾರಣ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ್ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು.
ಕೊರೊನಾ ಸೋಂಕು ಹರಡದಂತೆ ಮುಂಜಾಗೃತವಾಗಿ ಕೇಂದ್ರ ಸರ್ಕಾರ ಭಾರತ ಲಾಕ್ ಡೌನ್ ಮಾಡಿದೆ. ದಿನನಿತ್ಯದ ವಸ್ತುಗಳ ಪೂರೈಕೆಗೆ ಅಧಿಕಾರಿಗಳು ಯಾವುದೇ ರೀತಿ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು. ಅಗತ್ಯ ವಸ್ತುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಹೊಟೇಲ್ ಬಂದ್ ಆಗಿರುವುದರಿಂದ ಕೆಲವರಿಗೆ ಆಹಾರದ ತೊಂದರೆಯಾಗುತ್ತಿದೆ. ಆದ ಕಾರಣ ಪಾರ್ಸಲ್ ವ್ಯವಸ್ಥೆ ಕಲ್ಪಿಸಬೇಕು ಎಂದು ಶಾಸಕರು ಅಧಿಕಾರಿಗಳಿಗೆ ತಿಳಿಸಿದರು.
ಕೃಷಿ ಚಟುವಟಿಕೆಗಳಿಗೆ ಕೂಲಿ ಕಾರ್ಮಿಕರಿಗೆ ತೊಂದರೆ ಕೊಡಬಾರದು. ರೈತರಿಗೆ ಬೇಕಾಗುವಂತ ರಸಗೊಬ್ಬರ ಯಾವುದೇ ರೀತಿ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಶಾಸಕ ಉಮೇಶ ಕತ್ತಿ ಹೇಳಿದರು.
ಎಇಒ ಎಂ.ಎಸ್ ಬಿರಾದಾರ ಪಾಟೀಲ, ತಹಶೀಲ್ದಾರ್ ಅಶೋಕ ಗುರಾಣಿ, ತಾಲ್ಲೂಕಾ ಆರೋಗ್ಯಾಧಿಕಾರಿ ಉದಯ ಕುಡಚಿ, ಸಿಪಿಐ ಗುರುರಾಜ ಕಲ್ಯಾಣ ಶೆಟ್ಟಿ ಇತರರು ಇದ್ದರು.