ಬೆಳಗಾವಿ: ಸೆಪ್ಟೆಂಬರ್ 28 ರಿಂದ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಭಕ್ತಾದಿಗಳ ದರ್ಶನಕ್ಕೆ ಅನುಮತಿ ನೀಡಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶಿಸಿದ್ದಾರೆ. ಕಳೆದ 17ತಿಂಗಳಿಂದ ಕೊವಿಡ್ ಹಿನ್ನೆಲೆಯಲ್ಲಿ ದೇವಿ ದರ್ಶನಕ್ಕೆ ಅವಕಾಶವನ್ನು ಸ್ಥಗಿತಗೊಳಿಸಲಾಗಿತ್ತು. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಯಲ್ಲಮ್ಮ ಗುಡ್ಡದಲ್ಲಿರುವ ದೇವಸ್ಥಾನಕ್ಕೆ ಮಹಾರಾಷ್ಟ್ರದಿಂದ ಅತಿ ಹೆಚ್ಚು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ದರ್ಶನಕ್ಕೆ ಅನುಮತಿ ನೀಡಲಾಗಿದ್ದರೂ, ಜನಸಂದಣಿ ಆಗುವಂತಹ ಉತ್ಸವ, ಜಾತ್ರೆ ಕಾರ್ಯಕ್ರಮ ನಡೆಸದಂತೆ ನಿರ್ಬಂಧ ವಿಧಿಸಲಾಗಿದೆ. ಕಡ್ಡಾಯವಾಗಿ ಕೊವಿಡ್ ನಿಯಮ ಪಾಲಿಸುವಂತೆ ಆಡಳಿತ ಮಂಡಳಿಗೆ ಸೂಚನೆ ನೀಡಲಾಗಿದೆ.
