Breaking News

ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ‘ಬನದ ಹುಣ್ಣಿಮೆ ಸಾರ್ವಜನಿಕ ಪ್ರವೇಶ ಇಲ್ಲ.

Spread the love

ಸವದತ್ತಿ (ಬೆಳಗಾವಿ): ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ‘ಬನದ ಹುಣ್ಣಿಮೆ’ ಅಂಗವಾಗಿ ಸೋಮವಾರ (ಜ.17) ನಡೆಯಬೇಕಿದ್ದ ಜಾತ್ರೆಯನ್ನು ಕೋವಿಡ್ ಕಾರಣದಿಂದ ರದ್ದುಪಡಿಸಲಾಗಿದೆ. ಧಾರ್ಮಿಕ ಕಾರ್ಯಕ್ರಮಗಳು ಸರಳವಾಗಿ ನಡೆಯಲಿವೆ.

ಬೆಳಿಗ್ಗೆ ಮತ್ತು ಸಂಜೆ ರೇಣುಕಾ ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಜರುಗಲಿದೆ. ಆದರೆ, ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ.

 

ದೇವಸ್ಥಾನಕ್ಕೆ ಸೀಮಿತವಾಗಿ ಅಧಿಕಾರಿಗಳು, ಅರ್ಚಕರು ಹಾಗೂ ಕೆಲವೇ ಗಣ್ಯರ ಉಪಸ್ಥಿತಿಯಲ್ಲಿ ಧಾರ್ಮಿಕ ಆಚರಣೆ ಕೈಗೊಳ್ಳಲಾಗುವುದು ಎಂದು ಯಲ್ಲಮ್ಮ ದೇವಸ್ಥಾನ ಅಧಿಕಾರಿಗಳು ತಿಳಿಸಿದ್ದಾರೆ.

 

ನಿಷೇಧದ ನಡುವೆಯೂ ಗುಡ್ಡದತ್ತ ಹರಿದುಬರುತ್ತಿರುವ ಭಕ್ತಸಮೂಹವನ್ನು ಬ್ಯಾರಿಕೇಡ್‌ ಅಳವಡಿಸಿ ತಡೆಯಲಾಗುತ್ತಿದೆ.

 

ಗುಡ್ಡಕ್ಕೆ ಸಂಪರ್ಕ ಕಲ್ಪಿಸುವ ಉಗರಗೋಳ, ಹಿರೇಕುಂಬಿ, ಚುಳಕಿ, ಮುನವಳ್ಳಿಯ ಶಿಂಧೋಗಿ ಕ್ರಾಸ್, ರಾಮದುರ್ಗ ಮಾರ್ಗದ ಹೂಲಿಕಟ್ಟಿ, ಬೈಲಹೊಂಗಲ ಮಾರ್ಗದ ಕರಿಕಟ್ಟಿ ಹಾಗೂ ಧಾರವಾಡ ಮಾರ್ಗದ ಹಿರೇಉಳ್ಳಿಗೇರಿಯಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದೆ. 4 ಸಿಪಿಐ, 10 ಪಿಎಸ್‌ಐ, 16 ಎಎಸ್‌ಐ ಹಾಗೂ 160 ಪೊಲೀಸರು ಮತ್ತು ಗೃಹರಕ್ಷಕ ದಳದ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಸವದತ್ತಿ ಠಾಣೆ ಸಿಪಿಐ ಮಂಜುನಾಥ ನಡುವಿನಮನಿ ತಿಳಿಸಿದರು.

 

ಕೊರೊನಾ ಪರಿಸ್ಥಿತಿಗೆ ಮುಂಚೆ, ಬನದ ಹುಣ್ಣಿಮೆ ಮುಖ್ಯ ಜಾತ್ರೆಯಂದು ಲಕ್ಷಾಂತರ ಭಕ್ತರು ಸೇರುತ್ತಿದ್ದರು. ಕೋವಿಡ್ ನಿಯಂತ್ರಣ ಸಲುವಾಗಿ ಈ ಸಲ ನಿರ್ಬಂಧ ಹೇರಲಾಗಿದೆ. ಸರಳವಾಗಿ ಕಾರ್ಯಕ್ರಮ ನಡೆಯಲಿದೆ. ಭಕ್ತರು ಸಹಕರಿಸಬೇಕು ಎಂದು ದೇವಸ್ಥಾನದ ಇಒ ರವಿ ಕೋಟಾರಗಸ್ತಿ ಕೋರಿದರು.

 

‘ಜನರ ಆರೋಗ್ಯ ಕಾಪಾಡುವ ಸಲುವಾಗಿ ಸರ್ಕಾರ ಭಕ್ತರಿಗೆ ನಿಷೇಧ ಹೇರಿದೆ. ಎಲ್ಲರೂ ತಮ್ಮ ಮನೆಗಳಲ್ಲೇ ದೇವಿ ಆರಾಧಿಸಬೇಕು’ ಎಂದು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಸಯ್ಯ ಹಿರೇಮಠ ಮನವಿ ಮಾಡಿದರು.


Spread the love

About Laxminews 24x7

Check Also

ಬ್ಯಾಂಕ್​ನಿಂದ ಹಣ ಡ್ರಾ ಮಾಡಿಕೊಂಡು ಹೋಗುವಾಗ ನಿವೃತ್ತ ಶಿಕ್ಷಕನ ಹತ್ಯೆ

Spread the loveಬೆಂಗಳೂರು, (ಡಿಸೆಂಬರ್ 03): ಸುದೀರ್ಘ ಸೇವೆಯ ಬಳಿಕ ನಿವೃತ್ತಿಯಾಗಿದ್ದ ಶಿಕ್ಷಕರೊಬ್ಬರು ಕನಸಿನ ಮನೆ ಕಟ್ಟಲು ಹಣ ಡ್ರಾ ಮಾಡಿಕೊಂಡು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ