ನಮ್ಮ ಸವದತ್ತಿ ಕ್ಷೇತ್ರದ ಜನತೆಗೆ ಗುಣಮಟ್ಟದ ಹಾಗೂ ಸುಸಜ್ಜಿತ ವೈದ್ಯಕೀಯ ಸೇವೆ ಒದಗಿಸುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಇಂದು ಸವದತ್ತಿ ಪಟ್ಟಣದಲ್ಲಿ ಒಂದು ಮಹತ್ವದ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಸವದತ್ತಿಯ ತಾಲೂಕಾ ಸಾರ್ವಜನಿಕ ಆಸ್ಪತ್ರೆಯ 100 ಹಾಸಿಗೆಗಳ ನೂತನ ಕಟ್ಟಡದ ವಿಸ್ತರಣೆ ಹಾಗೂ ನವೀಕರಣ ಕಾಮಗಾರಿಯ ಶಂಕುಸ್ಥಾಪನಾ ಸಮಾರಂಭವು ಇಂದು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಕರ್ನಾಟಕ ಸರ್ಕಾರದ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ Dinesh Gundu Rao ಅವರ ಅಮೃತ ಹಸ್ತದಿಂದ ಈ ಅಭಿವೃದ್ಧಿ ಕಾಮಗಾರಿಗೆ ಅಧಿಕೃತವಾಗಿ ಅವರೊಂದಿಗೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿ ಸವದತ್ತಿ ತಾಲೂಕಿನ ಜನರಿಗೆ ತುರ್ತು ಸಂದರ್ಭಗಳಲ್ಲಿ ಉತ್ತಮ ಚಿಕಿತ್ಸೆ ಸ್ಥಳೀಯವಾಗಿಯೇ ಸಿಗಬೇಕು ಎನ್ನುವುದು ನಮ್ಮ ಗುರಿ. ಈ 100 ಹಾಸಿಗೆಗಳ ಆಸ್ಪತ್ರೆಯ ವಿಸ್ತರಣೆಯಿಂದ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ.
ಆಸ್ಪತ್ರೆಯ ನವೀಕರಣದೊಂದಿಗೆ ಆಧುನಿಕ ವೈದ್ಯಕೀಯ ಉಪಕರಣಗಳು ಹಾಗೂ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಇದನ್ನು ಮಾದರಿ ತಾಲೂಕು ಆಸ್ಪತ್ರೆಯನ್ನಾಗಿ ರೂಪಿಸಲಾಗುವುದು.
ಕ್ಷೇತ್ರದ ಪ್ರತಿಯೊಬ್ಬ ನಾಗರಿಕರಿಗೂ ಉತ್ತಮ ಆರೋಗ್ಯ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ನಮ್ಮ ಅಭಿವೃದ್ಧಿ ಪಯಣ ನಿರಂತರವಾಗಿ ಮುಂದುವರಿಯಲಿದೆ. ಅಂದಾಜು ವೆಚ್ಚ ರೂ. 31 ಕೋಟಿ.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Laxmi News 24×7