ಪರಿಶಿಷ್ಟರ ಮೀಸಲಾತಿ ಹೆಚ್ಚಿಸುವಂತೆ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ಆಯೋಗಕ್ಕೆ ಆಗ್ರಹ..!!
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಹೆಚ್ಚಿಸುವ ಕುರಿತು ರಾಜ್ಯ ಸರ್ಕಾರ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಅವರ ಅಧ್ಯಕ್ಷತೆಯಲ್ಲಿ ಆಯೋಗ ರಚಿಸಿದ್ದರಿಂದ ಪ.ಜಾ/ಪ.ಪಂ ಜನರಿಂದ ಅಹವಾಲು ಸ್ವೀಕೃತಿ ಮತ್ತು ಸಮಾಲೋಚನೆ ಸಭೆಯನ್ನು ಬೆಳಗಾವಿ ನಗರದ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಆಯೋಜಿಸಲಾಗಿತ್ತು.
ಈ ಸಭೆಗೆ ಬೆಳಗಾವಿ ವಿಭಾಗದಲ್ಲಿ ಬರುವ ಏಳು ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಂದ ಸಾರ್ವಜನಿಕರು ಭಾಗವಹಿಸಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಿಸುವ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಮೌಖಿಕವಾಗಿ ವ್ಯಕ್ತಪಡಿಸಿ ಲಿಖಿತವಾಗಿ ಮನವಿ ಸಲ್ಲಿಸಿದರು.
